ಕೊಳ್ಳೇಗಾಲ : ಪಟ್ಣಣದ ಕೊಂಗವೀರೇಗೌಡರ ಹಾಸ್ಟೆಲ್ (ಶ್ರೀ ಗುರುಮಲ್ಲೇಶ್ವರ ಸ್ಕೂಲ್) ನಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಪರ ಸಂಘಟನೆಗಳ ಸಹಯೋಗದಲ್ಲಿ ಮೇ 27 ರಂದು ಬೆಳಗ್ಗೆ 10.30 ಗಂಟೆಗೆ ಬಸವೇಶ್ವರರ 892ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಶ್ರೀ ಮಹಾಂತಸ್ವಾಮಿ ಮತ್ತು ಶ್ರೀ ಮಲೆ ಮಹದೇಶ್ವರ ಬೆಟ್ಟ ಸಾಲೂರು ಬೃಹನ್ಮಠದ ಶ್ರೀ ಡಾ. ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. ಚಾಮರಾಜನಗರ ಜಾಗತಿಕ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ ಹಾಗೂ ಮುಡಿಗಂಡ ವಿರಕ್ತ ಮಠದ ಶ್ರೀ ಶ್ರೀಕಂಠಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕುಂದೂರು ಮಠದ ಶ್ರೀ ಡಾ.ಶರಶ್ಚಂದ್ರ ಸ್ವಾಮೀಜಿ ಬಸವ ನುಡಿಯಾಡಲಿದ್ದಾರೆ. ತಾಲೂಕು ಜಾಗತಿಕ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ ಹಾಗೂ ಕಾಮಗೆರೆ ಪಟ್ಟಣ ಮಠದ ಶೀ ಮುಮ್ಮಡಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ಗುಂಡೇಗಾಲ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಚಿಕ್ಕಿಂದುವಾಡಿ ಮಠದ ಶ್ರೀ ಬಾಲಷಡಕ್ಷರಿ ಸ್ವಾಮೀಜಿ, ಚಿಲಕವಾಡಿ ಮಠದ ಶ್ರೀಇಮ್ಮಡಿ ಗುರುಲಿಂಗಸ್ವಾಮೀಜಿ, ಆಹಹಳ್ಳಿ ಮಠದ ಶ್ರೀಇಮ್ಮಡಿ ಬಸಪ್ಪ ಸ್ವಾಮೀಜಿ, ಹೊಂಡರಬಾಳು ಮಠದ ಶ್ರೀ ಪ್ರಸನ್ನ ಮಲ್ಲಿಕಾರ್ಜುನ ಸ್ವಾಮೀಜಿ, ಕೊಳ್ಳೇಗಾಲ ದಾಸೋಹ ಮಠದ ಶ್ರೀಶಿವಪ್ಪ ಸ್ವಾಮೀಜಿ, ಕುಂತೂರು ಮಠದ ಶ್ರೀ ಶಿವಪ್ರಭುಸ್ವಾಮೀಜಿ, ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಚಾಮುಲ್ ಅಧ್ಯಕ್ಷ ನಂಜುಂಡ ಸ್ವಾಮಿ, ಯುವ ಮುಖಂಡ ನಿಶಾಂತ್, ತಾ.ಪಂ. ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಪ್ರೀತ್, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಗುರುಸ್ವಾಮಿ, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಎಂ.ಲೋಕೇಶ್ ಪಾಲ್ಗೊಳ್ಳಲಿದ್ದಾರೆ.