ಬೆಂಗಳೂರು:
ಬಯಲು ಸೀಮೆ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಮತ್ತು ಮೂವರು ಸಿಬ್ಬಂದಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಮೇಲ್ಮನೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ತಿಳಿಸಿದ್ದಾರೆ.
ಗಮನ ಸೆಳೆಯುವ ಸೂಚನೆ ಅಡಿಯಲ್ಲಿ ಜೆಡಿಎಸ್‌ನ ಗೋವಿಂದ ರಾಜು ವಿಷಯ ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿದ ಸಚಿವರು, ಅನುದಾನವಿಲ್ಲದೆ ಇದ್ದರೂ, 374 ಕೋಟಿ ರೂ ಮೊತ್ತದ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿತ್ತು. ಅದಕ್ಕಾಗಿಯೇ ಅಮಾನತ್ತು ಮಾಡಲಾಗಿದೆ ಎಂದರು.
ಕಳೆದ ಸರ್ಕಾರದ ಅವಧಿಯಲ್ಲಿ ಈ ರೀತಿ ಘಟನೆ ನಡೆದಿದೆ. ಈಗ ಮಂಜೂರಾತಿ ಕಾಮಗಾರಿಗೆ 250 ಕೋಟಿ ರೂ ಅನುದಾನ ಬೇಕಾಗಿದೆ ಎಂದರು.
ಈ ಬಗ್ಗೆ ಕ್ರಿಯಾಯೋಜನೆ ಮಾಡಿದ್ದನ್ನು ತಡೆಹಿಡಿಯಲಾಗಿದೆ. ಸಿಎಂ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.