ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಸುಶೀಲ ಶಿವಪ್ಪ ನಿಧನ

Susheela Shivappa
Published on

ಬೆಂಗಳೂರು: ರಾಜ್ಯ ಬಿಜೆಪಿಯ ಭೀಷ್ಮ,ಅಜಾತಶತ್ರು ಎಂದೇ ಕರೆಯಲ್ಪಡುತ್ತಿದ್ದ ದಿವಂಗತ ಬಿ.ಬಿ. ಶಿವಪ್ಪನವರ ಧರ್ಮಪತ್ನಿ ಸುಶೀಲ ಶಿವಪ್ಪ (91) ಕುಂಬ್ರಲ್ಲಿಯ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ ನಿಧನರಾದರು.

ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನದ ನಂತರ ಕುಂಬ್ರಲ್ಲಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಶೀಲ ಅವರು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಸುಶೀಲಮ್ಮ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net