

ಬೆಂಗಳೂರು: ಬಿಗ್‌ಬಾಸ್ ದಿನದಿಂದ ದಿನಕ್ಕೆ ಕಷ್ಟದ ಹಾದಿಯತ್ತ ಸಾಗುತ್ತಿದ್ದು, ಮನೆಯೊಳಗಿನ ಸ್ಪರ್ಧಿಗಳಿಗೆ ಪ್ರತಿವಾರವೂ ಹೊಸ ಹೊಸ ಚಾಲೆಂಜ್‌ಗಳು ಎದುರಾಗುತ್ತಿವೆ. ಇಂದಿದ್ದ ಹಾಗೆ ನಾಳೆ ಇಲ್ಲ. ಈ ಮನೆಯೊಳಗೆ ಯಾರೂ ಸ್ನೇಹಿತರೂ ಅಲ್ಲ, ಯಾರೂ ಶತ್ರುಗಳೂ ಅಲ್ಲ ಎಂಬುದು ಸಾಬೀತಾಗುತ್ತಿದೆ.
ಈ ವಿಷಯವನ್ನು ಮತ್ತೊಮ್ಮೆ ಮನವರಿಕೆ ಮಾಡಿಕೊಡುವಂಥ ಚಟುವಟಿಕೆಯನ್ನು ಸುದೀಪ್ ಅವರ ‘ಸೂಪರ್ ಸಂಡೆ ವಿತ್ ಸುದೀಪ್’ ಎಪಿಸೋಡಿನಲ್ಲಿ ಸ್ಪರ್ಧಿಗಳ ಬಳಿ ಮಾಡಿಸಿದ್ದಾರೆ. ಒಂದು ಬೆರ್ಚಪ್ಪನನ್ನು ನಿಲ್ಲಿಸಲಾಗಿದೆ. ಅದರ ಮೇಲೆ ಒಂದು ಮಡಿಕೆ ಇರಿಸಿ, ಅದರ ಮೇಲೆ ಸದಸ್ಯರೊಬ್ಬರ ಫೋಟೊ ಹಾಕಿ, ಯಾವ ವಿಚಾರಕ್ಕೆ ಅವರ ಮೇಲೆ ಕೋಪ ಇದೆ ಎಂಬುದನ್ನು ಹೇಳಿ ಆಮೇಲೆ ಆ ಮಡಿಕೆಯನ್ನು ಒಡೆಯಬೇಕು. ಇದು ಟಾಸ್ಕ್ ನಿಯಮ.
ಈ ಚಟುವಟಿಕೆ ಮನೆಯೊಳಗಿನ ಸಮತೋಲವನ್ನು ಒಮ್ಮೆ ಕದಡುವುದಂತೂ ಖಚಿತ. ಎಲ್ಲರೂ ಊಹಿಸುವಂತೆ ವಿನಯ್, ಸಂಗೀತಾ ಫೋಟೋ ಇಟ್ಟು ಮಡಿಕೆ ಒಡೆದಿದ್ದಾರೆ. ಸಂಗೀತಾ ಕೂಡ ವಿನಯ್ ಫೋಟೋ ಇರಿಸಿ, ಮಡಿಕೆ ಪುಡಿ ಪುಡಿ ಮಾಡಿದ್ದಾರೆ. ಆದ್ರೆ, ಈ ನಡುವೆ ಇನ್ನೊಂದು ಶಾಕಿಂಗ್ ಆಯ್ಕೆ ನಡೆದಿದೆ. ಅದು ಕಾರ್ತಿಕ್ ಅವರದ್ದು. ಕಾರ್ತಿಕ್ ಮಡಿಕೆಯ ಮೇಲಿಟ್ಟಿದ್ದು ಸಂಗೀತಾ ಫೋಟೊವನ್ನು! ಸದಾ ಕಾಲ ನನ್ನ ಫ್ರೆಂಡ್ ಎಂದೇ ಹೇಳಿಕೊಂಡು ಬಂದಿದ್ದ ಕಾರ್ತಿಕ್, ಹಲವು ಸಂದರ್ಭಗಳಲ್ಲಿ ಅವರ ಪರವಾಗಿ ಗಟ್ಟಿಯಾಗಿ ನಿಂತಿದ್ದರು ಕೂಡ.
ಆದ್ರೆ, ಹಿಂದಿನ ವಾರದದಲ್ಲಿ ಪ್ರತಾಪ್ ಜತೆ ಮಾತನಾಡುತ್ತ, ‘ಕಾರ್ತಿಕ್ ಬಕೆಟ್ ಹಿಡಿತಿದಾರೆ ಅನಿಸ್ತಿಲ್ವಾ?’ ಎಂದು ಸಂಗೀತಾ ಹೇಳಿದ್ದು ಅವರಿಗೆ ನೋವನ್ನುಂಟು ಮಾಡಿದೆ. ಹಾಗೆಯೇ ‘ಕಾರ್ತಿಕ್ ಅವರಿಂದ ಸಂಗೀತಾರನ್ನು ಮೈನಸ್ ಮಾಡಿದ್ರೆ ಜೀರೊ ಬರುತ್ತದೆ’ ಎಂದಿರುವುದೂ ಅವರಿಗೆ ಅಸಮಧಾನ ಮೂಡಿಸಿದೆ. ಈ ಕಾರಣ ಕೊಟ್ಟು ಸಂಗೀತಾ ಫೋಟೊ ಇಟ್ಟು ಮಡಿಕೆ ಒಡೆದಿರುವ ಕಾರ್ತಿಕ್, ‘ನನ್ನಿಂದ ಸಂಗೀತಾರನ್ನು ಮೈನಸ್ ಮಾಡಿದ್ದೇನೆ. ನಾನು ಜಿರೊ ಅನ್ನುವುದನ್ನು ಪ್ರೂವ್ ಮಾಡಲಿ’ ಎಂದು ಸವಾಲು ಹಾಕಿದರು.
ಇದು ಮುಂದಿನ ವಾರದ ಟಾಸ್ಕ್‌ಗಳು ಇನ್ನಷ್ಟು ಟಫ್ ಆಗುವುದರ ಸೂಚನೆಯಂತೂ ಖಂಡಿತವಾಗಿ ನೀಡಿದೆ. ಮನೆಯ ಸಮತೋಲನಗಳು ಏರುಪೇರಾದಾಗ ಏನಾಗುತ್ತದೆ? ಯಾರು ಮುನ್ನಲೆಗೆ ಬರುತ್ತಾರೆ? ಯಾರು ಹಿನ್ನೆಲೆಗೆ ಸರಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ದಿನದ 24 ಗಂಟೆಗಳ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.