

ಬೆಂಗಳೂರು: ಮಿಡ್-ವೀಕ್ ಎಲಿಮಿನೇಷನ್ನಲ್ಲಿ ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದ ತನಿಷಾ, ನಾನು ಇನ್ನಷ್ಟು ದಿನ ಉಳಿದುಕೊಳ್ಳಲು ಅರ್ಹಳು ಎಂಬ ಆತ್ಮವಿಶ್ವಾಸದಲ್ಲಿಯೇ ಇದ್ದೆ. ಆ ನಂಬಿಕೆ ಮುರಿದುಹೋಯಿತು ಎಂಬ ಬೇಜಾರಿದೆ. ಆದ್ರೆ, ಆಚೆ ಬಂದು ಸ್ವಲ್ಪ ರಿಲ್ಯಾಕ್ಸ್ ಆಗಿ ಯೋಚಿಸಿದಾಗ ನನ್ನ ಜರ್ನಿ ನನಗೆ ಖುಷಿ ಕೊಟ್ಟಿದೆ. ನಾನು ಮಾಡಬೇಕಾದ ಎಲ್ಲ ಕೆಲಸಗಳನ್ನೂ ಅಚ್ಚುಕಟ್ಟಾಗಿ ಮಾಡಿ ಮುಗಿಸಿದ್ದೇನೆ.
ಹಾಗಾಗಿ ನಾನು ಬಿಗ್‌ಬಾಸ್ ಮನೆಯ ಒಳಗೆ ಇದ್ದಾಗ ಎಷ್ಟು ಖುಷಿಯಾಗಿದ್ದಿನೋ, ತೃಪ್ತಳಾಗಿದ್ದೇನೋ. ಆಚೆ ಬಂದಾಗಲೂ ಹಾಗೆಯೇ ಇದ್ದೇನೆ. ಈಗ ನಾನು ಎಲ್ಲರ ಮನೆಯ ಮಗಳಾಗಿದ್ದೇನೆ. ನನಗೆ ತುಂಬ ಖುಷಿ ಕೊಟ್ಟ ಪಯಣವಿದು. ತಪ್ಪು ಅಂತ ಏನೂ ಮಾಡಿಲ್ಲ. ಸಣ್ಣಪುಟ್ಟ ತಪ್ಪುಗಳನ್ನು ಮಾಡ್ತೀವಿ. ಅದು ಎಲ್ಲರಿಂದಲೂ ನಡೆಯುತ್ತದೆ. ಬಹುಶಃ ಜನರು ನಿರೀಕ್ಷೆ ಮಾಡುತ್ತಿರುವ ಯಾವುದನ್ನೋ ಹೊಸದಾಗಿ ಕೊಡಲಿಲ್ವೇನೋ ಅಂತ ಅನಿಸಿತು ಅಷ್ಟೇ. ನಾವಲ್ಲದೇ ಇರುವುದನ್ನು ಮಾಡಿದ್ರೆ ಖಂಡಿತವಾಗಿ ಫೇಕ್ ಆಗಿ ಕಾಣಿಸ್ತೀವಿ ಎಂದಿದ್ದಾರೆ ತನಿಷಾ.
ಮೊದಲಿಂದಲೂ ನಾನು ನನ್ನ ಬೆಸ್ಟ್ ಅನ್ನು ಕೊಡುತ್ತ ಬಂದಿದ್ದೀನಿ. ಯಾರು ಏನೇ ಅಂದುಕೊಂಡರೂ, ಎಲ್ಲರೂ ಟಾರ್ಗೆಟ್ ಮಾಡಿದಾಗಲೂ ಮನಸ್ಸಿಗೆ ತೆಗೆದುಕೊಳ್ಳದೆ ಆಡಿದ್ದೇನೆ. ಯಾಕೆಂದರೆ ಅದು ಗೇಮ್. ಆದ್ರೆ ಪ್ರತಿ ಸಲ ನನ್ನ ಧ್ವನಿಯನ್ನು ಎತ್ತಿಕೊಂಡು ಮಾತಾಡಿದಾಗಲೂ, ಅದನ್ನು ಹೆಚ್ಚು ನಮ್ರತಾ, ವಿನಯ್ ಮಾತಾಡಿದ್ದಾರೆ. ಪ್ರತಿ ನಾಮಿನೇಷನ್‌ನಲ್ಲಿಯೂ ಈ ಕಾರಣ ಕೊಟ್ಟಿದ್ದಾರೆ. ಅವರೇನೋ ಕಡಿಮೆ ಧ್ವನಿಯಲ್ಲಿ ಮಾತಾಡುತ್ತಾರೆ ಎನ್ನುವ ರೀತಿಯಲ್ಲಿ. ನಾನು ಯಾವ ಜಾಗದಲ್ಲಿ ಮಾತಾಡಬೇಕೋ ಆ ಜಾಗದಲ್ಲಿ ಮಾತಾಡಿದ್ದೇನೆ ಎಂದರು.
ಇನ್ನು ಸಂಗೀತಾ, ಕಾರ್ತಿಕ್ ಹಾಗೂ ತಮ್ಮ ಸ್ನೇಹದ ಬಗ್ಗೆ ಮಾತನಾಡಿದ ತನಿಷಾ, ಮೊದಲಿನಿಂದ ಒಟ್ಟಿಗೆ ಇದ್ದಿದ್ದರಿಂದ ನಮ್ಮ ನಡುವೆ ಒಳ್ಳೆಯ ಫ್ರೆಂಡ್‌ಷಿಪ್ ಮೂಡಿತು. ಆದರೆ ಅವರಿಬ್ಬರೂ ಸ್ವಲ್ಪ ಜಾಸ್ತಿ ಕ್ಲೋಸ್ ಆಗಿರುವುದು ನನಗೆ ಖಂಡಿತವಾಗಲೂ ಗೊತ್ತಿತ್ತು. ಆ ಕಾರಣಕ್ಕೆ ನಾನು ಇದು ಗುಂಪಲ್ಲ. ನನಗೆ ಇವರ ಜತೆಗೆ ಹೆಚ್ಚು ಮಾತಾಡಬೇಕು ಅನಿಸುತ್ತದೆ ಅಷ್ಟೆ ಎಂದು ಹೇಳಿಕೊಂಡು ಎಲ್ಲರೊಟ್ಟಿಗೆ ಮಾತಾಡಿಕೊಂಡು ಓಡಾಡಿಕೊಂಡೇ ಇದ್ದೆ ಎಂದು ಹೇಳಿದರು.
ಅವರ ದುಃಖಕ್ಕೆ ಸ್ಪಂದಿಸುವುದಕ್ಕೆ ಪ್ರತಿ ಸಲ ನಾನು ಇರುತ್ತಿದ್ದೆ. ಆದರೆ ತನಿಷಾಗೆ, ತನಿಷಾ ಥರ ಯಾರೂ ಇರಲಿಲ್ಲ. ನನ್ನ ದುಃಖಕ್ಕಾಗಲಿ, ಖುಷಿಗಾಗಲಿ, ನನ್ನ ಕೋಪಕ್ಕಾಗಲಿ ಸ್ಪಂದಿಸುವವರು ಯಾರೂ ಇರಲಿಲ್ಲ. ಸಂಗೀತಾಗೆ ಏನು ಸಮಸ್ಯೆ ಎಂದರೆ, ಫ್ರೆಂಡ್ಸ್ ಅಂದ್ರೆ ಅವರನ್ನು ಸ್ವಲ್ಪ ತಲೆಮೇಲೆ ಇಟ್ಕೋಬೇಕು. ಆಗ ಅವರಿಗೆ ಸಮಾಧಾನವಾಗುತ್ತದೆ. ಇಲ್ಲ ಅಂದ್ರೆ ಸಮಾಧಾನ ಆಗುವುದಿಲ್ಲ. ನಾನು ಜಗಳ ಆಯ್ತು ಅಂದ್ರೆ ಅಲ್ಲಲ್ಲೇ ಬಿಟ್ಟು ಹೋಗ್ತಾ ಇರ್ತೀನಿ. ಅವ್ರು ಜನರನ್ನೇ ಬಿಟ್ಟು ಹೋಗ್ತಿರ್ತಾರೆ. ಹಾಗಾಗಿ ಅವರು ತಪ್ಪು ಮಾಡಿದ್ರೂ ತುಂಬ ಬೇಗ ಕ್ಷಮಿಸಿ ನಾರ್ಮಲ್ ಆಗಿಬಿಡ್ತಿದ್ದೆ ಎಂದು ಹೇಳಿದರು.
ಕಾರ್ತಿಕ್ ವಿಚಾರಕ್ಕೆ ಬಂದ್ರೆ, ಕಾರ್ತಿಕ್ ಸ್ವಲ್ಪ ತಡವಾಗಿ ಅರ್ಥ ಮಾಡಿಕೊಳ್ಳುವುದು. ತುಂಬ ಚೆನ್ನಾಗಿದ್ರು, ಕೊನೆ ಕ್ಷಣದಲ್ಲಿ ಬೇರೆ ಯಾರದೋ ಮಾತು ಕೇಳಿಕೊಂಡು ಎಡವಿದ್ರು ಅಂತ ಅನಿಸ್ತು. ಪ್ರತಿ ಸಲ ಹೇಳಬೇಕಾದ್ರೆ ನಾನು ಇರ್ತಿದ್ದೆ. ಆದ್ರೆ ಅವು ಇರ್ತಿರ್ಲಿಲ್ಲ. ಹಾಗಾಗಿ ಒಬ್ರು ಸ್ವಲ್ಪ ಬೇಗ ದೂರವಾದ್ರು. ಇನ್ನೊಬ್ರು ಸ್ವಲ್ಪ ತಡವಾಗಿ ದೂರವಾದ್ರು. ಆಚೆ ಹೋದರೆ ಬಹುಶಃ ನಾನು ಕಾರ್ತಿಕ್ ಜತೆಗೆ ಸ್ನೇಹ ಮುಂದುವರಿಸ್ತೀನಿ ಎಂದು ತನಿಷಾ ಹೇಳಿದ್ದಾರೆ.
ದಿನದ 24 ಗಂಟೆಗಳ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.