BBKS10: ಒಂದು ಮನ ಮೂರು ದೇಹ ಅನ್ನುವಂತಿದ್ದವರು ಈಗ ದೂರ!

Untitled design (61)
Published on

ಬೆಂಗಳೂರು: ಆರನೇ ವಾರಕ್ಕೆ ಕಾಲಿಟ್ಟಿರುವ ಬಿಗ್​ ಬಾಸ್​ ಸ್ಪರ್ಧಿಗಳು ಟಾಸ್ಕ್​ಗಳನ್ನು ಭರ್ಜರಿಯಾಗಿ ಆಡುತ್ತಿದ್ದರೂ ಕೂಡ ತಮ್ಮೊಳಗೆ ಇತರ ಸದಸ್ಯರ ವಿರುದ್ಧ ಒಂದು ಭಿನ್ನಾಭಿಪ್ರಾಯ ಮೂಡಲು ಜಾಗ ಮಾಡಿಕೊಟ್ಟಿದ್ದಾರೆ. ಸದ್ಯ ಈ ಸಾಲಿನಲ್ಲಿರುವವರು ಸಂಗೀತಾ-ಕಾರ್ತಿಕ್ ಮತ್ತು ತನಿಷಾ.

ಫ್ರೆಂಡ್‌ಷಿಪ್‌ ಬ್ರೇಕಪ್ ಜತೆಗೆ ಸಂಗೀತಾ ಹಾರ್ಟ್‌ ಬ್ರೋಕಪ್! ಬಿಗ್‌ಬಾಸ್‌ ಕನ್ನಡ ಈ ಸೀಸನ್‌ ಆರಂಭದಿಂದಲೂ ಒಂದು ಮನ ಮೂರು ದೇಹ ಅನ್ನುವಂತಿದ್ದವರು ಸಂಗೀತಾ-ಕಾರ್ತಿಕ್ ಮತ್ತು ತನಿಷಾ. ಹಲವು ಸಂಕಷ್ಟದ ಸಂದರ್ಭಗಳಲ್ಲಿಯೂ ಮೂವರೂ ಒಬ್ಬರಿಗೊಬ್ಬರು ಹೆಗಲೆಣೆಯಾಗಿ ನಿಂತುಕೊಂಡಿದ್ದರು. ಪ್ರತಿಸ್ಪರ್ಧಿಗಳನ್ನು ಒಟ್ಟಾಗಿ ಎದುರಿಸಿದ್ದರು. ಸಂಗೀತಾ ಜೈಲಿಗೆ ಹೋದ ಸಂದರ್ಭದಲ್ಲಂತೂ ಕಾರ್ತಿಕ್, "ನಾವು ಮೂರು ಜನರೂ ಈ ಮನೆಗೆ ಬಂದ ದಿನದಿಂದಲೂ ಒಟ್ಟಿಗಿದ್ದೇವೆ. ಮುಂದೆಯೂ ಒಟ್ಟಿಗಿರುತ್ತೇವೆ. ಫ್ರೆಂಡ್‌ಗೆ ತೊಂದರೆಯಾದಾಗ ಅವರನ್ನು ಬೆಂಬಲಿಸುವುದು ನನ್ನ ಕರ್ತವ್ಯ" ಎಂದು ಹೇಳಿದ್ದರು.

"ನನ್ನ ಸ್ನೇಹಿತರ ಜತೆ ನಾನು ನಿಂತೇ ನಿಲ್ಲುತ್ತೇನೆ" ಎಂದು ಗಟ್ಟಿಯಾಗಿ ಹೇಳಿದ್ದರು. ಆದರೆ ಈಗ ಈ ಮೂವರ ಫ್ರೆಂಡ್‌ಷಿಪ್‌ ಗಾಳಿಪಟದ ಸೂತ್ರ ಹರಿದಂತಿದೆ. ನಿನ್ನೆಯ ಎಲಿಮಿನೇಷನ್‌ನ ಲೂಡೋ ಟಾಸ್ಕ್‌ನಲ್ಲಿ ಒಂದು ಹಂತದಲ್ಲಿ ಕಾರ್ತಿಕ್ ಮತ್ತು ತನಿಷಾಗೆ ಎದುರಾಳಿ ತಂಡದ ಒಬ್ಬರನ್ನು ಸೇವ್ ಮಾಡುವ ಅವಕಾಶ ಸಿಕ್ಕಿತ್ತು. ಆದರೆ ಅಲ್ಲಿ ಆದದ್ದೇ ಬೇರೆ! ತನಿಷಾ, ನಾವು ಎದುರಾಳಿ ತಂಡದಿಂದ ಸಿರಿ ಅವರನ್ನು ಸೇವ್ ಮಾಡುತ್ತೇವೆ’ ಎಂದು ಘೋಷಿಸಿದರು.

ಅಲ್ಲಿಯವರೆಗೂ ನಗುನಗುತ್ತ ಕುಣಿದಾಡುತ್ತಿದ್ದ ಸಂಗೀತಾ ಮುಖದಲ್ಲಿ ಒಮ್ಮೆಲೇ ದುಮ್ಮಾನ ಕಾಣಿಸಿಕೊಂಡಿತ್ತು. ಮೇಲ್ನೋಟಕ್ಕೆ ಆ ಕ್ಷಣದಲ್ಲಿ ಮಗಿದು ಹೋದಂತೆ ಕಂಡರೂ ಸಂಗೀತಾ ಮನಸಲ್ಲಿ ಈ ವಿಷಯ ಬೆಳಯುತ್ತಲೇ ಇದ್ದ ಹಾಗಿದೆ. ಇಂದಿನ ಪ್ರೋಮೊದಲ್ಲಿ ಸಂಗೀತಾ ಮತ್ತು ತನಿಷಾ ಪರಸ್ಪರ ವಾದ ಮಾಡಿಕೊಳ್ಳುತ್ತಿರುವ, ಕೊನೆಯಲ್ಲಿ ಸಂಗೀತಾ, ‘ಕಿರುಚಬೇಡಿ ತನಿಷಾ’ ಎಂದು ಗಟ್ಟಿಯಾಗಿ ಹೇಳಿದರು.

ಒಂದು ಕಡೆ ಸಂಗೀತಾ ಕಾರ್ತಿಕ್ ಬಳಿ, "ನಿಮ್ಮ ಕೈಯಲ್ಲಿ ನನ್ನನ್ನು ಸೇವ್ ಮಾಡುವ ಚಾನ್ಸ್ ಇತ್ತು" ಎಂದು ಹೇಳಿದ್ದಾರೆ. ಇನ್ನೊಂದೆಡೆಗೆ ತನಿಷಾ ಬಳಿ, "ನೀವು ನನ್ನನ್ನ ಸೇವ್ ಮಾಡ್ಲಿಲ್ಲ" ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಚರ್ಚೆಯಲ್ಲಿ ತನಿಷಾ, "ವರ್ತೂರು ಅವರು ಸಂಗೀತಾನ ಸೇವ್ ಮಾಡೋದು ಬೇಡ ಅಂತ ಹೇಳಿದ್ರು" ಎಂದು ಹೇಳಿದ್ದಾರೆ. ಸಂಗೀತಾ ನೇರವಾಗಿ ವರ್ತೂರ್ ಬಳಿ ವಿಚಾರಿಸಿದಾಗ, "ಸಂಗೀತಾ ಅನ್ನೋ ಹೆಸರೇ ಬಂದಿರಲಿಲ್ಲ" ಎಂದರು. ಅಲ್ಲಿಗೆ ಸಂಗೀತಾಗೆ ತನಿಷಾ ಸುಳ್ಳು ಹೇಳಿದ್ದಾರೆ ಎಂಬುದು ಗೊತ್ತಾಗಿದೆ.

‘ನಮ್ಮಲ್ಲೊಂದು ಫ್ರೆಂಡ್‌ಷಿಪ್ ಇತ್ತು. ಒಂದು ನಂಬಿಕೆ ಇತ್ತು. ಆ ನಂಬಿಕೆ ಬ್ರೇಕ್ ಆಗಿದೆ’ ಎಂದು ಹೇಳಿ ತನಿಷಾ ಮತ್ತು ಕಾರ್ತಿಕ್ ಜತೆಗಿನ ಫ್ರೆಂಡ್‌ಷಿಪ್ ಅನ್ನು ಸಂಗೀತಾ ಕೊನೆಗೊಳಿಸಿದ್ದಾರೆ.

ದಿನದ 24 ಗಂಟೆಗಳ ಲೈವ್​ ಸ್ಟ್ರೀಮಿಂಗ್​ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net