

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ರ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಣ್ಣ ಪ್ರಮಾಣದಲ್ಲಿ ಆರಂಭವಾಗಿದ್ದ ಜ್ವರ ಕ್ರಮೇಣವಾಗಿ ಹೆಚ್ಚಾಗಿದ್ದು, ಕನ್ನಿಂಗ್‌ಹ್ಯಾಂ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ತುಷಾರ್ ಗಿರಿನಾಥ್ರ ಹೆಸರು ಮುನ್ನಲೆಗೆ ಬಂದಿದೆ. ಈ ನಡುವೆ ಆಯುಕ್ತರಿಗೆ ಜ್ವರ ಕಾಣಿಸಿಕೊಂಡಿದೆ.
ಕಳೆದ ಶನಿವಾರದಿಂದ ತುಷಾರ್ ಗಿರಿನಾಥ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಬಳಿ ತಪಾಸಣೆ ಮಾಡಿಸಿಕೊಂಡಾಗ ಯೂರಿನರಿ ಇನ್‌ಫೆಕ್ಷನ್ ಆಗಿರುವುದು ಗೊತ್ತಾಗಿದೆ. ಮನೆಯಲ್ಲೇ ಔಷಧ ಹಾಗೂ ಇಂಜೆಕ್ಷನ್ ನೀಡಲಾಗಿತ್ತು. ಇದೀಗ ಜ್ವರ ಉಲ್ಬಣಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.