ಕೋವಿಡ್ 19: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರ ನೇಮಕಾತಿಗೆ ನೇರ ಸಂದರ್ಶನ ನಾಳೆಯಿಂದ

Doctors
Published on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೊನಾ ವೈರಸ್ ನಿಯಂತ್ರಣಕ್ಕೆ ಅವಶ್ಯವಿರುವ ಹೆಚ್ಚುವರಿ ಮಾನವ ಸಂಪನ್ಮೂಲವನ್ನು ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಂಬಿಬಿಎಸ್ , ದಂತ , ಆಯುಷ್ ವೈದ್ಯರು, ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಜುಲೈ 27 ರಿಂದ 29 ರವರೆಗೆ ಸರ್ ಪುಟ್ಟಣ್ಣಶೆಟ್ಟಿ ಟೌನ್​ ಹಾಲ್, ಬೆಂಗಳೂರು- ಇಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.30ರ ವರೆಗೆ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 080-22975583 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net