ನಟ ದರ್ಶನ್​ರನ್ನು ಬ್ಯಾನ್ ಮಾಡುವುದರಿಂದ ಏನು ಪ್ರಯೋಜನ? ಮಾಜಿ ಸಚಿವ ಬಿ.ಸಿ. ಪಾಟೀಲ್​ ಹೇಳಿದ್ದಿಷ್ಟು

Untitled design - 2024-06-17T145705.921
Published on

ಹಾವೇರಿ: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಿಸಿ ಪಾಟೀಲ್​, ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದ್ದರಿಂದ ರಾಜ್ಯದ ಜನತೆಯಲ್ಲಿ ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ ಮಾಡಿದಂತೆ ಇದು. ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ. ಸಾರ್ವಜನಿಕರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಕೊಟ್ಟರೂ ಜನರು 'ಕೈ' ಹಿಡಿಯಲಿಲ್ಲ ಎಂದು ಹತಾಶರಾಗಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವ್ಯಂಗ್ಯವಾಡಿದರು.

"187 ಕೋಟಿ ರೂ. ಭ್ರಷ್ಟಾಚಾರ ಮಾಡಿ ಆಂದ್ರಪ್ರದೇಶದ ಚುನಾವಣೆಗೆ ಬಳಸಿದ್ದಾರೆ. ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕೈವಾಡವಿದೆ. ನಾಗೇಂದ್ರ ಅವರ ರಾಜೀನಾಮೆ ಪಡೆದು ಪ್ರಕರಣ ಮುಚ್ಚಿ ಹಾಕುವುದಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಡಳಿತ ಯಂತ್ರ ಕುಸಿದು ಬಿದ್ದಿದೆ. ಆಡಳಿತ ನಡೆಸಲು ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ. ಮೊದಲು ಸಿಎಂ, ಡಿಸಿಎಂ ತಲೆದಂಡ ಮಾಡಿಕೊಂಡು ಮಂತ್ರಿಗಳ ರಾಜೀನಾಮೆ ಕೇಳುವುದು ಸೂಕ್ತ" ಎಂದಿದ್ದಾರೆ.

ಇನ್ನು ನಟ ದರ್ಶನ್​ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಕೃಷಿ ಸಚಿವನಾಗಿದ್ದಾಗ ದರ್ಶನ್ ಅವರನ್ನು ರಾಯಭಾರಿ ಮಾಡಲಾಗಿತ್ತು. ಅವತ್ತು ದರ್ಶನ್ ಈ ರೀತಿಯ ಕೃತ್ಯದಲ್ಲಿ ಭಾಗಿಯಾಗಿರಲಿಲ್ಲ. ರೇಣುಕಸ್ವಾಮಿ ಹತ್ಯೆಯಾಗಿರುವುದು ಹೇಯ ಕೃತ್ಯ. ಯಾರೂ ಇದನ್ನು ಕ್ಷಮಿಸುವುದಿಲ್ಲ. ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ" ಎಂದರು.

"ದರ್ಶನ್​ರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವುದರಿಂದ ಏನು ಪ್ರಯೋಜನ? ಈಗಾಗಲೇ ಅವರು ಜೈಲಿನಲ್ಲಿದ್ದಾರೆ" ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net