ಬಿಡಿಎಯಿಂದ 6.5 ಕೋಟಿ ರೂ. ಮೌಲ್ಯದ ಆಸ್ತಿ ವಶ

bda eviction
Published on

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅನಧಿಕೃತ ನಿರ್ಮಾಣ ತೆರವುಗೊಳಿಸುವ ಕಾರ್ಯವನ್ನು ಮುಂದುವರೆಸಿದ್ದು, ಮಂಗಳವಾರ ಹಾಗೂ ಬುಧವಾರ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಒಟ್ಟು 6.5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮರುವಶಕ್ಕೆ ಪಡಿದುಕೊಂಡಿದೆ.

ಬುಧವಾರ ಪ್ರಾಧಿಕಾರವು ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್, ನೀಲಸಂದ್ರದಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ನಿರ್ಮಾಣವನ್ನು ತೆರವುಗೊಳಿಸಿದೆ. ಇಲ್ಲಿ ಒತ್ತುವರಿದಾರರು ಶೆಡ್‌ಗಳನ್ನು ನಿರ್ಮಿಸಿಕೊಂಡು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದರು. ತೆರವುಗೊಳಿಸುವಂತೆ ಎಚ್ಚರಿಕೆ ನೀಡಿದರೂ, ಜಾಗ ಖಾಲಿ ಮಾಡದ ಕಾರಣ ಕಾರ್ಯಾಚರಣೆ ನಡೆಸಿ 3 ಕೋಟಿ ರೂ. ಮೌಲ್ಯದ ಸೈಟ್‌ಅನ್ನು ವಶಪಡಿಸಿಕೊಳ್ಳಲಾಯಿತು.

ನಂದಿನಿ ಬಡಾವಣೆಯಲ್ಲೂ ಆಸ್ತಿ ವಶ:

ಮಂಗಳವಾರ ನಡೆದ ಕಾರ್ಯಾಚರಣೆಯಲ್ಲಿ ರಾಜೀವ್‌ಗಾಂಧಿನಗರ, ನಂದಿನಿ ಬಡಾವಣೆಯಲ್ಲಿನ 3.5 ಕೋಟಿ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಬಿಡಿಎ ಕಾರ್ಯಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರ ಹಾಗೂ ಎಇಇ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net