ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಿ

18manju6
Published on

ಬೆಳಗಾವಿ: ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ರ್ನಿಲಕ್ಷ$್ಯ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು.

ರಾಮದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಮಗಾರಿಗಳ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಇದಕ್ಕೂ ಮೊದಲು ರಾಮದುರ್ಗ ತಾಲೂಕಿನ ಹಿರೇಕೊಪ್ಪ ಕೆ.ಎಸ್​. ಗ್ರಾಪಂಗೆ ಭೇಟಿ ನೀಡಿದ ಅವರು ಮನರೇಗಾ ಯೋಜನೆಯಡಿ ಕೈಗೊಂಡಿದ್ದ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರನ್ನು ಭೇಟಿ ಮಾಡಿ ಕೂಲಿ ಜಮೆ ಹಾಗೂ ಇತರ ಕುಂದು ಕೊರತೆ ಆಲಿಸಿದರು.

ಬಳಿಕ ಗ್ರಾಪಂ ಸದಸ್ಯರೊಂದಿಗೆ ಸಭೆ ನಡೆಸಿ ಸಿಬ್ಬಂದಿ ಹಾಜರಾತಿ, ಇ ಸ್ವತ್ತು ಹಾಗೂ ತೆರಿಗೆ ವಸೂಲಾತಿ ಅಲ್ಲದೇ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲಿಸಿದರು. ಇಇ ಎಸ್​.ಬಿ.ಕೊಳಿ, ತಾಪಂ ಇಒ ಬಸವರಾಜ್​ ಐನಾಪುರ, ನಿಜಾಂ ಸುರಪುರ, ಶಂಕರ ಕುಂಬಾರ, ಶೇಖರ್​ ಹಿರೇಸೋಮಣ್ಣವರ, ಅಪ್ಪಯಪ್ಪ ಕುಂದಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net