

ಕೆ.ಆರ್.ನಗರ: ಮುಂಗಾರು ಮಳೆ ಸಮಯದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಮನೆಯ ಹೊರಾಂಗಣದಲ್ಲಿರುವ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆಯ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾ, ಡೆಂೆ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಹೇಳಿದರು.
ಪಟ್ಟಣದ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಡೆಂೆ ಮತ್ತು ಚಿಕೂನ್ ಗುನ್ಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೊಳ್ಳೆಗಳಿಂದ ಹರಡುವ ಡೆಂೆ ಹಾಗೂ ಚಿಕೂನ್ ಗುನ್ಯಾ ರೋಗವು ವೈರಾಣು ಸೋಂಕಾಗಿದ್ದು, ಇದಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಇರುವುದಿಲ್ಲ. ಆದರೆ ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಪಕ್ಷದಲ್ಲಿ ಡೆಂೆ ಜ್ವರವು ಉಲ್ಬಣಿಸಲಿದೆ. ಇದರಿಂದ ಸಾವು ಕೂಡ ಸಂಭವಿಸಬಹುದು ಎಂದರು.
ಡೆಂೆ ಹಾಗೂ ಚಿಕೂನ್ ಗುನ್ಯಾ ನಿಯಂತ್ರಿಸಬೇಕಾದಲ್ಲಿ ರೋಗ ಹರಡುವ ಸೊಳ್ಳೆಗಳ ನಿಯಂತ್ರಣವೇ ಅತಿ ಮುಖ್ಯ. ಈ ಸೊಳ್ಳೆಗಳು ಮನೆಗಳಲ್ಲಿನ ನೀರಿನ ಶೇಖರಣೆಗಳಲ್ಲಿ ಹಾಗೂ ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ಮಳೆನೀರು ಸಂಗ್ರಹವಾಗುವ ತ್ಯಾಜ್ಯ ವಸ್ತುಗಳಲ್ಲಿ ಉತ್ಪತ್ತಿಯಾಗುವುದರಿಂದ, ನೀರು ಶೇಖರಣೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕಿನಲ್ಲಿ ಅಂದಾಜು 10 ಸಾವಿರಕ್ಕು ಹೆಚ್ಚು ವಿದ್ಯಾರ್ಥಿಗಳು ಇರಬಹುದಾಗಿದ್ದು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರದಲ್ಲಿನ ರಸ್ತೆಯಲ್ಲಿ ನಿಂತ ನೀರು, ತೆಂಗಿನ ಚಿಪ್ಪಿನಲ್ಲಿನಿಂತ ನೀರು, ಒಡೆದ ಬಾಟಲಿ, ಟಿನ್, ಟೈರ್ ಮತ್ತಿತರ ಘನತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ಸಂಗ್ರಹವಾಗಿದ್ದರೆ ತೆರವುಗೊಳಿಸಿ. ಇದರಿಂದಾಗಿ ರೋಗ ಹರಡದಂತೆ ತಡೆಗಟ್ಟಬಹುದು. ಎಂದು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಆರೋಗ್ಯ ಇಲಾಖೆ ಕೀಟಶಾಸ್ತ್ರಜ್ಞೆ ರತ್ಮಕುಮಾರಿ, ಜೆಎಸ್‌ಎಸ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಕಾತ್ಯಾಯಿನಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಚ್.ಜೆ.ಮಹೇಶ್, ರವಿ, ಮಂಜು, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಆರೋಗ್ಯ ಸಂರಕ್ಷಣಾಧಿಕಾರಿ ಪಾರ್ವತಿ, ನರ್ಸ್‌ಗಳಾದ ಹೇಮಲತಾ, ಸುಮಲತಾ, ವಾಣಿ, ಹಾಗೂ ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಇದ್ದರು.