ಇಂಗ್ಲಿಷ್ ಬಗ್ಗೆ ಆಸಕ್ತಿ ಇರಲಿ, ವ್ಯಾಮೋಹ ಬೇಡ

01 CRP-3A
ಚಗಚಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶುಕ್ರವಾರ ನಡೆದ ಇಂಗ್ಲಿಷ್ ಫೆಸ್ಟ್ ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್, ಯೋಗೇಶ್, ಈಶ್ವರಪ್ಪ, ನಂಜೇಗೌಡ, ಜಯರಾಮು, ಪ್ರಮೀಳಾ ಮರಿಯಪ್ಪ ಇತರರು ಪಾಲ್ಗೊಂಡಿದ್ದರು.
Published on

ಗಂಡಸಿ : ಇಂಗ್ಲಿಷ್ ಕಲಿಕೆಯ ಬಗ್ಗೆ ಪಾಲಕರಲ್ಲಿ ಆಸಕ್ತಿ ಇರಲಿ, ಆದರೆ ಅತಿಯಾದ ವ್ಯಾಮೋಹ ಬೇಡ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ತಿಳಿಸಿದರು.

ಹೋಬಳಿಯ ಚಗಚಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಇಂಗ್ಲಿಷ್ ಫೆಸ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೂರು ವರ್ಷಗಳ ಹಿಂದೆ ಚಗಚಗೆರೆ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 25ಕ್ಕೆ ಕುಸಿದಿತ್ತು. ಶಾಲೆಯ ಉಳಿವಿಗಾಗಿ ಪಾಲಕರು, ಗ್ರಾಮಸ್ಥರು, ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಶಾಲೆಗೆ ಬೇಕಾಗುವ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ನೀಡಿದ ಪರಿಣಾಮ ಮಕ್ಕಳ ದಾಖಲಾತಿಯ ಸಂಖ್ಯೆ 120 ಏರಿಕೆಯಾಗಿದೆ. ಇದಕ್ಕೆಲ್ಲ ಶಿಕ್ಷಕರು ಪರಿಶ್ರಮ, ಪಾಲಕರ ಸಹಕಾರ ಕಾರಣ ಎಂದರು.

ಸರ್ಕಾರಿ ಶಾಲೆಗಳಲ್ಲೂ ನರ್ಸರಿ ತರಗತಿಯಿಂದಲೇ ನುರಿತ ಶಿಕ್ಷಕರಿಂದ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುತ್ತಿದ್ದು 20 ರಿಂದ 30 ಕಿ.ಮೀ. ದೂರದ ತಾಲೂಕು ಕೇಂದ್ರಗಳ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಬದಲು ಉಚಿತ ಶಿಕ್ಷಣ, ಬಿಸಿಯೂಟ, ಕ್ಷೀರ ಭಾಗ್ಯ, ವಿದ್ಯಾರ್ಥಿ ವೇತನ ಈ ಎಲ್ಲ ಸೌಲಭ್ಯಗಳು ಉಚಿತವಾಗಿ ದೊರೆಯುವ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಯೋಗೇಶ್, ತಾ.ಪಂ. ಮಾಜಿ ಸದಸ್ಯ ಈಶ್ವರಪ್ಪ, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಯರಾಮ್, ಗ್ರಾ.ಪಂ. ಮಾಜಿ ಅಧ್ಯಕ್ಷ ನಂಜೇಗೌಡ, ಗ್ರಾ.ಪಂ. ಉಪಾಧ್ಯಕ್ಷ ಪ್ರಮೀಳಾ ಮರಿಯಪ್ಪ , ಪಾಲಕರು, ಗ್ರಾಮಸ್ಥರು, ಶಿಕ್ಷಕರು, ಹಳೇ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net