ಬೆಳಪು ಗ್ರಾಪಂ ಅಭಿವೃದ್ಧಿ ರಾಷ್ಟ್ರಕ್ಕೆ ಮಾದರಿ

congress
Published on

ಪಡುಬಿದ್ರಿ: ರಾಜ್ಯ ರಾಷ್ಟ್ರಕ್ಕೆ ಮಾದರಿಯಾಗಿರುವ ಬೆಳಪು ಗ್ರಾಮ ಪಂಚಾಯಿತಿ ಅಭಿವೃದ್ಧಿ ಕೆಲಸಗಳು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಳಪು ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿದ ಅವರು ಬೆಳಪು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ, ರಾಜ್ಯ, ರಾಷ್ಟ್ರಕ್ಕೆ ಮಾದರಿಯಾಗುವ ರೀತಿಯಲ್ಲಿ ಕೈಗಾರಿಕಾ ಪಾರ್ಕ್, ವಿಜ್ಞಾನ ಸಂಶೋಧನಾ ಕೇಂದ್ರ, ಸಾರ್ವಜನಿಕ ಹಿಂದು ರುದ್ರಭೂಮಿ ಸಹಿತವಾಗಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಎಲ್ಲೆಡೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ತಾಪಂ ಉಪಾಧ್ಯಕ್ಷ ಯು.ಸಿ.ಶೇಖಬ್ಬ, ಬೆಳಪು ಗ್ರಾಪಂ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಸುವರ್ಣ, ಹರೀಶ್ ನಾಯಕ್, ಜಹೀರ್ ಬೆಳಪು, ಪ್ರಶಾಂತ್ ಜತ್ತನ್ನ, ಗ್ರಾಪಂ ಮಾಜಿ ಸದಸ್ಯರು, ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.

ಶೀಘ್ರ ಚುನಾವಣೆ ನಿರೀಕ್ಷೆ: ರಾಜ್ಯದಲ್ಲಿ ಗ್ರಾಪಂ ಚುನಾವಣೆ ಈಗಾಗಲೇ ನಡೆಯಬೇಕಿದ್ದು, ಸರ್ಕಾರ ವಿವಿಧ ಕಾರಣಗಳಿಂದ ಚುನಾವಣೆಯನ್ನು ಮುಂದೂಡುತ್ತಾ ಬರಲಾಗಿದೆ. ಆದರೆ ಇದೀಗ ಹೈಕೋರ್ಟ್ ಚುನಾವಣೆಯ ವೇಳಾಪಟ್ಟಿಯನ್ನು ಶೀಘ್ರ ಹೊರಡಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶ ನೀಡಿದ್ದು, ಶೀಘ್ರ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಜಾರಕಿಹೊಳಿ ಉತ್ತರಿಸಿದರು.

ಬೆಳಪು ಗ್ರಾಪಂ ಯೋಜನೆಗಳನ್ನು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು. ಕ್ಷೇತ್ರದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ತಂಡದಿಂದ ಇಲ್ಲಿನ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಿ, ಅವುಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಯೋಚಿಸಲಾಗುವುದು. ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net