

ಅರಸೀಕೆರೆ (ಗ್ರಾಮಾಂತರ): ತಾಲೂಕಿನ ಹಾರನಹಳ್ಳಿ ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಸುರಿದ ಮಳೆಗೆ ಬಿ.ತಾಂಡ್ಯ ಗ್ರಾಮದ ದೇವಿಬಾಯಿ ಅವರಿಗೆ ಸೇರಿದ ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೀನ್ಸ್ ಸಂಪೂರ್ಣ ನಾಶವಾಗಿದೆ.
ಬೀನ್ಸ್ ಬೆಳೆಯಲು ಸಾವಿರಾರು ರೂ. ಖರ್ಚು ಮಾಡಿ ಬೆಳೆದ ತರಕಾರಿ ಕೈಗೆ ಬಂದ ಬೆಳೆ ಪ್ರಕೃತಿ ವಿಕೋಪದಿಂದ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ಸರ್ಕಾರದಿಂದ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ. ಸ್ಥಳಕ್ಕೆ ಹಾರನಹಳ್ಳಿ ವೃತ್ತದ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.