

ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿದ ಕಾಂಗ್ರೆಸ್ ಸರ್ಕಾರ, ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರತಿ ಬಾಟಲ್ ಬಿಯರ್ ಮೇಲೆ 10 ರೂ.ನಿಂದ 40 ರೂ.ವರೆಗೆ ದರ ಹೆಚ್ಚಿಸಿದ್ದು, ಹೊಸ ದರ ಜ.20ರಿಂದ ಜಾರಿಗೆ ಬರಲಿದೆ.
ಸರ್ಕಾರಕ್ಕೆ ಅಬಕಾರಿ ಇಲಾಖೆ ದರ ಹೆಚ್ಚಳ ಪ್ರಸ್ತಾವನೆ ಸಲ್ಲಿಸಿತ್ತು. ಐದು ತಿಂಗಳ ಹಿಂದೆ ಬಿಯರ್ ದರ ಪರಿಷ್ಕರಣೆಗೆ ಕರಡು ಅಧಿಸೂಚನೆ ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲಾಗಿತ್ತು. ಆ ಪ್ರಸ್ತಾವನೆಗೆ ಸರ್ಕಾರ ಇದೀಗ, ಅನುಮೋದನೆ ನೀಡಿದೆ. ಇದರಿಂದಾಗಿ ಕೆಲ ಬಿಯರ್ ಬ್ರಾ್ಯಂಡ್ಗಳ ಮೇಲೆ ಅಬಕಾರಿ ಸುಂಕ ಹೆಚ್ಚಳವಾಗಿದೆ.
2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ, ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಇದಕ್ಕೂ ಮುನ್ನ ರಾಜ್ಯದಲ್ಲಿ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲ್ ಮೇಲೆ ಹೆಚ್ಚವರಿ ಅಬಕಾರಿ ಸುಂಕವನ್ನು ಶೇ.10 ಹೆಚ್ಚಿಸಲಾಗಿತ್ತು. ಇದೀಗ 3ನೇ ಬಾರಿ ಬಿಯರ್ ಮೇಲೆ ದರ ಹೆಚ್ಚಿಸಲಾಗಿದೆ.