

ಬೆಂಗಳೂರು: ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಜಿಎಸ್‌ಟಿ ಕಡಿತ, ಸರಳೀಕರಣ ಮಹತ್ವದ ಘೋಷಣೆ ಮಾಡಿದ್ದಾರೆ. ಇದರಿಂದ ಬರುವಂತಹ ದಿನಗಳಲ್ಲಿ ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಬಹಳ ಅನುಕೂಲಕವಾಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಜಿಎಸ್‌ಟಿ ತೆರಿಗೆ ಬಂದು ಐದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಜಿಎಸ್‌ಟಿ ಒಂದು ರಾಷ್ಟ್ರ ಒಂದು ತೆರಿಗೆ ಮತ್ತು ತೆರಿಗೆ ಸರಳೀಕರಣ ಮತ್ತು ಅತ್ಯಂತ ಸರಳವಾಗಿರುವ ತೆರಿಗೆ ಪದ್ಧತಿ ಇರಬೇಕು.
ವಿಶೇಷವಾಗಿ ಸಣ್ಣ ವ್ಯಾಪರಸ್ಥರಿಗೆ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಪಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದಾರೆ.
ಆದರೆ ಐದು ವರ್ಷದ ಅನುಭವದಲ್ಲಿ ಕೆಲವು ಬದಲಾವಣೆ ಬಯಸಿ, ರೈತರು, ಸಣ್ಣ ವ್ಯಾಪಾರಸ್ಥರು, ದೊಡ್ಡ ವ್ಯಾಪಾರಸ್ಥರು ಎಲ್ಲರೂ ಕೂಡ ಅಭಿಪ್ರಾಯ ಪಟ್ಟ ಹಿನ್ನೆಲೆಯಲ್ಲಿ ತೆರಿಗೆಯ ಸ್ಲ್ಯಾಬ್ ಕಡಿಮೆ ಮಾಡಬೇಕು ಮತ್ತು ಕೆಲವು ವಸ್ತುಗಳ ತೆರಿಗೆ ಕಡಿಮೆ ಮಾಡಬೇಕು ಎಂದು ಬಯಸಿದ್ದರು.
ಮೋದಿಯವರು ತೀರ್ಮಾನ ಮಾಡಿ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ನನ್ನ ನೇತೃತ್ವದಲ್ಲಿ ಗ್ರುಪ್ ಆಫ್ ಮಿನಿಸ್ಟರ್ಸ್ ಸುಮಾರು ಒಂದೂವರೆ ವರ್ಷ ನಾವು ಅಧ್ಯಯನ ಮಾಡಿ ಹಲವಾರು ಸರಿಳೀಕರಣ ಮತ್ತು ವರ್ಗೀಕರಣ ಮಾಡಿ ನಮ್ಮ ವರದಿ ಕೊಟ್ಟಿದ್ದೇವೆ.
ಇದರಲ್ಲಿ ಬಹಳಷ್ಟು ದಿನಬಳಕೆಯಾಗುವ ವಸ್ತುಗಳು ಅವುಗಳನ್ನು ಕಡಿಮೆ ಸ್ಲ್ಯಾಬ್‌ನಲ್ಲಿ ಹಾಕುವಂಥದ್ದು ಸ್ಲ್ಯಾಬ್ ಸಂಖ್ಯೆ ಕಡಿಮೆ ಮಾಡುವುದು. ಇದರಿಂದ ವ್ಯಾಪಾರಸ್ಥರಿಗೆ ಮತ್ತು ಖರೀದಿದಾರರಿಗೆ ಇಬ್ಬರಿಗೂ ಅನುಕೂಲವಾಗುವ ರೀತಿಯಲ್ಲಿ ನಾವು ಕೆಲವು ಸಲಹೆ ಸೂಚನೆಗಳನ್ನು ಅಂದು ಜಿಎಸ್‌ಟಿ ಕೌನಿಲ್‌ನಲ್ಲಿ ಮಂಡನೆ ಮಾಡಿದ್ದೇವು ಎಂದು ತಿಳಿಸಿದ್ದಾರೆ.
ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಒಪ್ಪಿರುವ ಕೆಲವು ತಿದ್ದುಪಡಿಗಳನ್ನು ತರಬೇಕೆಂದು ಕೇಂದ್ರ ಸರ್ಕಾರದ ತೀರ್ಮಾನವನ್ನು ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ.
ತೆರಿಗೆಯ ಸರಳೀಕರಣ ಮಹತ್ವದ ಹೆಜ್ಜೆ ಘೋಷಣೆ ಮಾಡಿದ್ದಾರೆ. ಬರುವಂತಹ ದಿನಗಳಲ್ಲಿ ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಬಹಳ ಅನುಕೂಲಕವಾಗಲಿದೆ.
ಇದೊಂದು ನರೇಂದ್ರ ಮೋದಿಯವರ ವಿಶೇಷವಾಗಿರುವ ಕೊಡುಗೆ ಬರುವ ದೀಪಾವಳಿಗೆ ಅವರು ಮಾಡುತ್ತಿರುವುದು ಇಡೀ ರಾಷ್ಟ್ರವೇ ಸ್ವಾಗತ ಮಾಡುತ್ತದೆ ಎನ್ನುವ ವಿಶ್ವಾಸ ನನಗಿದೆ. ನಾನು ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.