ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ!

saraswathi sarkar
Published on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕೋಲ್ಕತ್ತಾದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ತೃಣಮೂಲ ಕಾಂಗ್ರೆಸ್ ನ ಗೂಂಡಾಗಳು ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಸರಸ್ವತಿ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಅವರ ತಲೆಯಿಂದ ರಕ್ತ ಸೋರುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪರ-ವಿರೋಧ ಚರ್ಚೆಯಾಗುತ್ತಿದೆ.

'ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ. ಶನಿವಾರ ರಾತ್ರಿ ಟಿಎಂಸಿ ಗೂಂಡಾಗಳು ಬಿಜೆಪಿಯ ಕಸ್ಬಾ ಮಂಡಲ್ ಅಧ್ಯಕ್ಷೆ (ದಕ್ಷಿಣ ಕೋಲ್ಕತ್ತಾ) ಸರಸ್ವತಿ ಸರ್ಕಾರ್ ಅವರನ್ನು ಗುರಿಯಾಗಿಸಿ ಹಲ್ಲೆ ನಡೆಸಿದ್ದಾರೆ. ಕೊಲ್ಕತ್ತಾ ಯಾವ ಮಹಿಳೆಗೂ ಸುರಕ್ಷಿತವಾಗಿಲ್ಲ. ಸಂದೇಶ್ ಕಾಲಿ ಪರಿಸ್ಥಿತಿ ಕೂಡ ತೀರಾ ಹದಗೆಟ್ಟಿದೆ. ಬಂಗಾಳದ ಜನರು ಈ ದುಷ್ಕೃತ್ಯಗಳಿಗೆ ತಕ್ಕ ಪಾಠ ಕಲಿಸುತ್ತಾರೆʼ ಎಂದು ಬಂಗಾಳದ ಬಿಜೆಪಿ ಉಸ್ತುವಾರಿ ಅಮಿತ್ ಮಾಳವಿಯಾ ಟ್ವೀಟ್‌ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net