ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಕುಸಿದು ಬಿದ್ದು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

Shreesailappa
Published on

ಬೆಂಗಳೂರು: ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು ನಡೆದ ಟಿಕೆಟ್​ ಆಕಾಂಕ್ಷಿಗಳ ಸಭೆಯಲ್ಲಿ ಶ್ರೀಶೈಲಪ್ಪ ಭಾಗಿಯಾಗಿದ್ದರು. ಸಭೆಯ ನಡುವೆಯೇ ಹೃದಯಾಘಾತದಿಂದ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ರೋಣ ಮತ್ತು ಗದಗದಲ್ಲಿ ಎಂಎಲ್ಎಯಾಗಿದ್ದ ಶ್ರೀಶೈಲಪ್ಪ 2019 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್​ನಿಂದ ಟಿಕೆಟ್​ ಪಡೆಯಲು ಪ್ರಯತ್ನಿಸುತ್ತಿದ್ದರು. ಆದರೆ, ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಶ್ರೀಶೈಲಪ್ಪ ನಿಧನರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಟಿಕೆಟ್​ ಆಕ್ಷಾಂಕ್ಷಿಗಳು ಸಭೆಯನ್ನು ಮುಂದೂಡಲಾಗಿದೆ. ಅದಕ್ಕೂ ಮುನ್ನ ಶ್ರೀಲಪ್ಪ ಅವರಿಗೆ ಕಾಂಗ್ರೆಸ್​ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು. ನವೆಂಬರ್ 27ರಂದು ಝೂಮ್ ಮೂಲಕ ಟಿಕೆಟ್​ ಆಕಾಂಕ್ಷಿಗಳ ಸಭೆಯನ್ನು ನಿಗದಿ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net