

ಬೆಂಗಳೂರು: ( Hyder Ali ) ಲೈವ್ ಬ್ಯಾಂಡ್‌ನಿಂದ ಹೊರ ಬರುತ್ತಿದ್ದ ಕಾಂಗ್ರೆಸ್ ಮುಖಂಡ ಹೈದರ್ ಅಲಿಯನ್ನು ಅಡ್ಡಗಟ್ಟಿ ಭೀಕರ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ನಡೆದಿದೆ.
ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಲೈವ್ ಬ್ಯಾಂಡ್‌ನಿಂದ ಹೊರ ಬರುತ್ತಿದ್ದ ಕಾಂಗ್ರೆಸ್ ಮುಖಂಡ ಹೈದರ್ ಅಲಿಯನ್ನು ಅಡ್ಡಗಟ್ಟಿ ಭೀಕರ ಹತ್ಯೆಗೈದಿದ್ದಾರೆ.
ಹೈದರ್ ಅಲಿ ಶನಿವಾರ (ಫೆ.22) ರಾತ್ರಿ ಲೈವ್ ಬ್ಯಾಂಡ್ ಕಾರ್ಯಕವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.
ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ ಹೈದರ್ ಅಲಿ ಮೃತಪಟ್ಟಿದ್ದನು.
ಹೈದರ್ ಅಶೋಕನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ. ಹೈದರ್ ಅಲಿ ವಿರುದ್ಧ ವಿವಿಧ ಠಾಣೆಗಳಲ್ಲಿ 11 ಕೇಸ್ ದಾಖಲಾಗಿದ್ದವು. 2014 ರಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು. 2022 ರಿಂದ ಯಾವುದೇ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿರಲಿಲ್ಲ. ಆದರೆ, ತನ್ನ ಏರಿಯಾದಲ್ಲಿ ಹವಾ ಮೆಂಟೈನ್ ಮಾಡುತ್ತಿದ್ದನು. ಆನೆಪಾಳ್ಯ ನಿವಾಸಿಯಾಗಿರುವ ಹೈದರ್ ಅಲಿ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.