

ಪುತ್ತೂರು: ಬೆಂಗಳೂರಿನಲ್ಲಿ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಕಂಬಳಕ್ಕೆ ಸಿದ್ದತೆಗಳು ನಡೆಯುತ್ತಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿ, ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ವಿವಿಧ ಸಂಘಟನೆಗಳ ಪ್ರಮುಖರ ಸಭೆ ನಡೆಯಿತು.
ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಏರ್ಪಡಿಸಲಾಗಿದ್ದು, ಕಂಬಳ ವೀಕ್ಷಣೆಗೆ ರಾಜ್ಯದ ನಾನಾ ಕಡೆಗಳಿಂದ ಕಂಬಳಾಭಿಮಾನಿಗಳು ಆಗಮಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್‌ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ ರೈ ಮಠಂತಬೆಟ್ಟು, ರಾಜ್‌ಕುಮಾರ್ ರೈ, ರಾಕೇಶ್ ರೈ ಕುದ್ರೈ?ಡಿ, ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್, ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ, ದೀಕ್ಷಿತ್ ರೈ ಉಪಸ್ಥಿತರಿದ್ದರು.