ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲು ಸಂಚಾರ; ಇಲ್ಲಿದೆ ಪೂರ್ಣ ವಿವರ…

Train
Published on

ಬೆಂಗಳೂರು: ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗಿರುವ ಹಿನ್ನಲೆ, ಜನರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಮುಂದಾಗಿದೆ.

ವಿಶೇಷ ರೈಲುಗಳ ಸಂಚಾರ

ರೈಲು ಸಂಖ್ಯೆ 06547/06548 ಕೆಎಸ್ಆರ್ ಬೆಂಗಳೂರು-ಮಂಗಳೂರು ಜಂಕ್ಷನ್-ಯಶವಂತಪುರ ಸ್ಪೆಷಲ್ ಎಕ್ಸ್​ಪ್ರೆಸ್

ರೈಲು ಸಂಖ್ಯೆ 06547 ಜುಲೈ 19 ರಂದು ರಾತ್ರಿ 11 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಎಸ್ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ನೆಲಮಂಗಲ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಮತ್ತು ಕಬಕ-ಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ 06548 ಜುಲೈ 20 ರಂದು ಮಧ್ಯಾಹ್ನ 1:40 ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ಆಗಮಿಸಲಿದೆ. ಈ ರೈಲು ಬಂಟ್ವಾಳ, ಕಬಕ-ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ನೆಲಮಂಗಲ, ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ 06549/06550 ಯಶವಂತಪುರ–ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 06549 ಜುಲೈ 21 ಮತ್ತು 22, 2024 ರಂದು ಮಧ್ಯರಾತ್ರಿ 12:30 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಿಗ್ಗೆ 11:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಮತ್ತು ಕಬಕ-ಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ 06550 ಜುಲೈ 21 ಮತ್ತು 22ರಂದು ಮಧ್ಯಾಹ್ನ 1.40ಕ್ಕೆ ಮಂಗಳೂರು ಜಂಕ್ಷನ್​ನಿಂದ ಹೊರಟು, ಅದೇ ದಿನ ರಾತ್ರಿ 11.15ಕ್ಕೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ. ಮಾರ್ಗದಲ್ಲಿ ಈ ರೈಲು ಬಂಟ್ವಾಳ, ಕಬಕ-ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ನೆಲಮಂಗಲ, ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ವಿಶೇಷ ರೈಲುಗಳು ಎಸಿ-ಟು ಟೈಯರ್-2, ಎಸಿ-ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-6, ಸಾಮಾನ್ಯ ದ್ವಿತೀಯ ದರ್ಜೆ-6 ಮತ್ತು ಎಸ್ಎಲ್ಆರ್/ಡಿ -2 ಸೇರಿದಂತೆ 18 ಬೋಗಿಗಳನ್ನು ಒಳಗೊಂಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net