Bengaluru Rains: ಸಿಲಿಕಾನ್​ ಸಿಟಿಯಲ್ಲಿ ವರುಣನ ಆರ್ಭಟ.. ಭಾರೀ ಮಳೆಗೆ ರಸ್ತೆಗಳು ಜಾಲವೃತ

rain fall
Published on

ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಕೆಆರ್​ ಮಾರ್ಕೆಟ್​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.  ಇಂದು ಸಂಜೆ ಸುರಿದ ಭಾರೀ ಮಳೆಗೆ ಮಹಾನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು ಕಂಡು ಬಂದಿದೆ.

ಆರ್.ಆರ್.ನಗರ, ನಾಯಂಡಳ್ಳಿ, ಸ್ಯಾಟ್‌ಲೈಟ್, ಟೌನ್​ಹಾಲ್, ಶಾಂತಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಆಗಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬಸ್ ನಿಲ್ದಾಣ, ಫ್ಲೈ ಓವರ್ ಕೆಳಗೆ ನಿಲ್ಲುವ ಮೂಲಕ ದ್ವಿಚಕ್ರ ವಾಹನ ಸವಾರರು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net