ಸೊಂಟಕ್ಕೆ ಮಗು ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ: ಗಂಡ ಸತ್ತ ದಿನವೇ ನಡೆಯಿತು ಘೋರ ದುರಂತ

BNG Woman
Published on

ಆನೇಕಲ್: ಗಂಡ ತೀರಿಕೊಂಡ ಎರಡು ವರ್ಷಗಳ ಬಳಿಕ ಅದೇ ದಿನದಂದು ಮಹಿಳೆಯೊಬ್ಬಳು ತನ್ನ ಮಗುವಿನೊಂದಿಗೆ ಕರೆಗೆ ಹಾರಿ ಸಾವಿಗೆ ಶರಣಾಗಿರುವ ಕರುಣಾಜನಕ ಘಟನೆ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ಕೆರೆಯಲ್ಲಿ ನಡೆದಿದೆ.

ಮೃತರನ್ನು ತಾಯಿ ವಿಜಯಲಕ್ಷ್ಮಿ (35) ಹಾಗೂ ಪುತ್ರ ಹರಿಹರನ್ (7) ಎಂದು ಗುರುತಿಸಲಾಗಿದೆ. ಇವರು ಸಿ.ಕೆ. ಪಾಳ್ಯದ ನಿವಾಸಿಗಳು. ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಕೆರೆಯಲ್ಲಿ ದುರರ್ಘಟನೆ ಸಂಭವಿಸಿದೆ.

Bengaluru Woman and Son

ಆಂಧ್ರ ಪ್ರದೇಶ ಮೂಲದ ಕುಟುಂಬ ಕೆಲ ವರ್ಷಗಳಿಂದ ಸಿ.ಕೆ. ಪಾಳ್ಯದಲ್ಲಿ ವಾಸವಿದ್ದರು. 2 ವರ್ಷದ ಹಿಂದೆ ನಡೆದ ಅಪಘಾತದಲ್ಲಿ ವಿಜಯಲಕ್ಷ್ಮೀ ಅವರ ಪತಿ ತೀರಿಕೊಂಡರು. ಇದಾದ ಬಳಿಕ ವಿಜಯಲಕ್ಷ್ಮೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.

Bengaluru Woman and Son

ಪತಿ ತೀರಿಕೊಂಡು ಇಂದಿಗೆ ಸರಿಯಾಗಿ 2 ವರ್ಷ ಕಳೆದಿವೆ. ಇದೀಗ ಪತಿ ತೀರಿಕೊಂಡ ದಿನವೇ ಮಗುವಿನ ಜತೆಗೆ ವಿಜಯಲಕ್ಷ್ಮೀ ಸಾವಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಮೃತ ದೇಹವನ್ನು ಹೊರತೆಗೆಯಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net