ಬಾಡಿಗೆ ಮನೆ ಕೇಳುವ ನೆಪದಲ್ಲಿ ಈ ಮಹಿಳೆ ಮಾಡಿದ್ದೇನು ಗೊತ್ತಾ?

bengaluru
Published on

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಯ ಮಾಲೀಕರಿಗೆ ದೊಣ್ಣೆಯಿಂದ ಹೊಡೆದ ಮಹಿಳೆ, 80 ಸಾವಿರ ರೂ. ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಸಿಸಿಟಿವಿ ದೃಶ್ಯವನ್ನು ಆಧರಿಸಿ ಆರೋಪಿ ಲಕ್ಷ್ಮಿಯನ್ನು(38) ಬಂಧಿಸಿದ ನಂದಿನಿ ಲೇಔಟ್ ಪೊಲೀಸರು, ಈ ಕುರಿತು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಘಟನೆಯ ವಿವರ: ಮೇ 25 ರಂದು ಶಾಂತಮ್ಮ ಎಂಬುವವರ ಬಳಿ ಮನೆ ಬಾಡಿಗೆಗೆ ಇದೆಯಾ ಎಂದು ಕೇಳಿದ ಲಕ್ಷ್ಮೀ, ಶಾಂತಮ್ಮ ಅವರಿಗೆ ದೊಣ್ಣೆಯಿಂದ ಹೊಡೆದು ಅವರಿಂದ 20 ಗ್ರಾಂ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದಾಳೆ. ಈ ಪ್ರಕರಣ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಬೆನ್ನಲ್ಲೇ ಪೊಲೀಸರು ಆರೋಪಿ ಲಕ್ಷ್ಮೀಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಲಕ್ಷ್ಮಿ ಬಳಿಯಿದ್ದ 80 ಸಾವಿರ ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಿದಾಗ ಈ ಹಿಂದೆಯೂ ಕೂಡ ಇದೇ ರೀತಿಯಲ್ಲಿ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net