ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್​ ಮೃತದೇಹ ಪತ್ತೆ

Body Builder 1
Published on

ಬೆಂಗಳೂರು: ನಗರದಲ್ಲಿ ಯುವ ದೇಹದಾರ್ಢ್ಯ ಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕೆ.ಆರ್.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತ ಯುವ ದೇಹದಾರ್ಢ್ಯ ಪಟುವನ್ನು ಶ್ರೀನಾಥ್ ಎಂದು ಗುರುತಿಸಲಾಗಿದೆ. ಶ್ರೀನಾಥ್​ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಓದಿನ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ, ನಿನ್ನೆ (ಜ.10) ತಾನು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮೂಲತಃ ಕೋಲಾರದ ಶ್ರೀನಿವಾಸಪುರ ಮೂಲದ ಶ್ರೀನಾಥ್ ಸಾವು ಇದೀಗ ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಸಾವಿನ ಬಗ್ಗೆ ಶ್ರೀನಾಥ್ ಪಾಲಕರು ಸಹ ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ತನಿಖೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ಏನು ಎಂದು ತಿಳಿದುಬರಲಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net