ಪ್ರಭಾವಿ ಸಚಿವರ ಜಿಲ್ಲೆಗೇ ಇಲ್ಲ ಉತ್ತಮ ಶಿಕ್ಷಕ ಪ್ರಶಸ್ತಿ

Teacher
Published on

ಬೆಂಗಳೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಿಕ್ಷಕರ ದಿನಾಚರಣೆ ಅಂಗವಾಗಿ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ.

ಪ್ರಾಥಮಿಕ ಶಾಲೆಯ 20 ಮತ್ತು ಪ್ರೌಢಶಾಲೆಯ 11 ಮಂದಿ ಸೇರಿ 31 ಶಿಕ್ಷಕರು, ಇಬ್ಬರು ಪ್ರಾಂಶುಪಾಲರು ಮತ್ತು 8 ಮಂದಿ ಉಪನ್ಯಾಸಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಮಹಿಳಾ ಶಿಕ್ಷಕಿಯರಿಗೆ ‘ಸಾವಿತ್ರಿಬಾಪುಲೆ’ ಹೆಸರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರು, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ತಲಾ 3 ಪ್ರಶಸ್ತಿಗಳು ದೊರೆತಿವೆ. ಆದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲೆಯಾದ ರಾಮನಗರ, ಕಲಬುರಗಿ, ಕೋಲಾರ ಮತ್ತು ಯಾದಗಿರಿ ಸೇರಿ 5 ಜಿಲ್ಲೆಗಳಲ್ಲಿ ಯಾವುದೇ ಶಿಕ್ಷಕರಿಗೆ ಪ್ರಶಸ್ತಿ ಪ್ರಕಟವಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net