

ಕೋಲಾರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಜಿಲ್ಲಾ ಸಿಇಎನ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮುಳಬಾಗಿಲು ನಗರದ ನಯಾಜ್ ಬಂಧಿತ. ಖಚಿತ ಮಾಹಿತಿ ಮೇರೆಗೆ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್.ಜಗದೀಶ್ ನೇತೃತ್ವದಲ್ಲಿ ಸಿಬ್ಬಂದಿ ವಿನಯ್, ಶಿವಾನಂದ, ಅರುಣ್ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ. ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್ಗಳ ಮೂಲಕ ಬೆಟ್ಟಿಂಗ್ ದಂಧೆ ನಡೆಸಿ ಸಾರ್ವಜನಿಕರಿಂದ ನಗದು ಮತ್ತು ಯುಪಿಐ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ. ದಂಧೆಗೆ ಬಳಕೆ ಮಾಡುತ್ತಿದ್ದ ಎರಡು ಮೊಬೈಲ್ ವಶಕ್ಕೆ ಪಡೆದಿದ್ದು, ಆರೋಪಿಯ ಬ್ಯಾಂಕ್ ಖಾತೆಯಲ್ಲಿದ್ದ 5.19 ಲಕ್ಷ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಂಡದ ಕಾರ್ಯಕ್ಕೆ ಎಸ್ಪಿ ಬಿ.ನಿಖಿಲ್, ಎಸ್ಪಿಗಳಾದ ರವಿ ಶಂಕರ್, ಎಚ್.ಸಿ.ಜಗದೀಶ್ ಶ್ಲಾಘಿಸಿದ್ದಾರೆ.