ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿ

12KDR1
ಕಡೂರಿನ ಲಕ್ಷ್ಮೀ ವೆಂಕಟೇಶ್ವರ ಗೀತಾ ಮಂದಿರದಲ್ಲಿ ನಡೆದ ಶಾಂತಿ ಸಭೆಯಲ್ಲಿ ತರೀಕೆರೆ ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿರಾವ್ ಮಾತನಾಡಿದರು. ಎಂ.ಪಿ.ಕವಿರಾಜ್, ಶಿವಕುಮಾರ್, ಸಿ.ಆರ್.ಪ್ರವೀಣ್, ರುದ್ರೇಶ್ ಮತ್ತಿತರಿದ್ದರು.
Published on

ಕಡೂರು: ಗಣಪತಿ ವಿಸರ್ಜನೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಎಚ್ಚರ ವಹಿಸಬೇಕು ಎಂದು ತರೀಕೆರೆ ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿರಾವ್ ತಿಳಿಸಿದರು.
ಲಕ್ಷ್ಮೀ ವೆಂಕಟೇಶ್ವರ ಗೀತಾ ಮಂದಿರದಲ್ಲಿ ಸೋಮವಾರ ಪೊಲೀಸ್ ಇಲಾಖೆಯಿಂದ ಗೌರಿ ಗಣೇಶ ಹಾಗೂ ಈದ್‌ಮೀಲಾದ್ ಪ್ರಯುಕ್ತ ನಡೆದ ಶಾಂತಿ ಸೌಹಾರ್ದ ಸಭೆಯಲ್ಲಿ ಅವರು ಮಾತನಾಡಿದರು.
ಸೆ.28 ರಂದು ಕೆಲವೆಡೆ ಗಣಪತಿ ವಿಸರ್ಜನೆ ಕಾರ್ಯಕ್ರಮವಿದೆ. ಅಂದೇ ಈದ್ ಮಿಲಾದ್ ಹಬ್ಬವೂ ಇರುವುದರಿಂದ ಸೂಕ್ತ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗುತ್ತದೆ. ಇದನ್ನು ನಿಬರ್ಂಧ ಎಂದು ಭಾವಿಸಬಾರದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸಲು ಮುಂದಾಗಬೇಕಿದೆ ಎಂದರು.
ತಹಸೀಲ್ದಾರ್ ಎಂ.ಪಿ.ಕವಿರಾಜ್ ಮಾತನಾಡಿ, ಹಬ್ಬಗಳು ಸಂಭ್ರಮದ ಆಚರಣೆಯಾಗಬೇಕು. ಹಬ್ಬಕ್ಕೆ ಪೊಲೀಸ್ ಬಂದೋಬಸ್ತ್ ಜತೆಗೆ ಆಯೋಜಕರು ಸ್ವಯಂ ಸೇವಕರನ್ನು ನೇಮಿಸಿ ಶಾಂತತೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಪಂಚಾಯಿತಿ ಇಒ ಸಿ.ಆರ್.ಪ್ರವೀಣ್ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಗಣಪತಿ ಪ್ರತಿ?ಷ್ಟಾಪಿಸಲು ಗ್ರಾಮಪಂಚಾಯಿತಿ ಕಚೇರಿಯಲ್ಲಿ ಅರ್ಜಿ ನೀಡಬಹುದು. ಅರ್ಜಿ ಪರಿಶೀಲಿಸಿ ಮೂರು ದಿನಗಳೊಳಗೆ ಅನುಮತಿ ನೀಡಲಾಗುವುದು. ಬ್ಯಾನರ್, ಬಂಟಿಂಕ್ಸ್ ಅಳವಡಿಸುವಂತಿಲ್ಲ. ರಾತ್ರಿ ಹತ್ತರ ನಂತರ ಮೈಕ್ ಹಾಕುವಂತಿಲ್ಲ. ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಪೂರ್ವಭಾವಿಯಾಗಿ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯಎಂದರು
ಕಡೂರು ಸಿಪಿಐ ಕೆ.ಆರ್.ಶಿವಕುಮಾರ್ ಮಾತನಾಡಿ, ಗಣಪತಿ ವಿಸರ್ಜನೆ ವೇಳೆ ಮೆರವಣಿಗೆ ನಡೆಸುವ ರಸ್ತೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಕಳೆದ ವಷರ್ದಂತೆಯೇ ಈ ಬಾರಿಯೂ ಅಳವಡಿಸಲಾಗುತ್ತದೆ. ಬ್ಯಾರಿಕೇಡ್‌ಗಳನ್ನು ಸೂಕ್ತ ಸ್ಥಳದಲ್ಲಿ ಅಳವಡಿಸಿ ಜನಸಂದಣಿ ನಿಯಂತ್ರಣಕ್ಕೆ ಕ್ರಮಕ್ಕೆ ಕ್ರಮಕೈಗಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net