ಕೈ ಅಭ್ಯರ್ಥಿಗಳಿಂದ ಬಿಫಾರಂ ಸ್ವೀಕಾರ

Congress preliminary meeting tomorrow
Congress preliminary meeting tomorrow
Published on

ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಾಳುವಾಗಿ ಅವಕಾಶ ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗುರುವಾರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಂದ ಬಿ ಫಾರಂ ಪಡೆದುಕೊಂಡರು.

ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕೆಲವು ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಪಕ್ಷದಿಂದ ಬಿ ಫಾರಂ ಪಡೆದುಕೊಂಡಿದ್ದು, ಸೋಮವಾರದ ಬಳಿಕ ನಾಮಪತ್ರ ಸಲ್ಲಿಸುವರು.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷರ ಮನೆಗೆ ಆಗಮಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯಾ ರೆಡ್ಡಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜೀವ್ ಗೌಡ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಸೇರಿದಂತೆ ಹಲವು ಅಭ್ಯರ್ಥಿಗಳು ಬಿ ಫಾರಂ ಪಡೆದುಕೊಂಡರು.

ಈ ವೇಳೆ ಪಕ್ಷದ ಅಧ್ಯಕ್ಷರು ಚುನಾವಣೆ ಪ್ರಚಾರದ ಕಾರ್ಯತಂತ್ರ, ವಾಸ್ತವ ಚಿತ್ರಣ ಕುರಿತು ಅಭ್ಯರ್ಥಿಗಳಿಂದ ಮಾಹಿತಿ ಪಡೆದುಕೊಂಡರು. ಹಾಗೆಯೇ ಅಭ್ಯರ್ಥಿಗಳು ತಮ್ಮ ಕ್ಷೇತ್ರಕ್ಕೆ ಪ್ರಚಾರಕ್ಕೆ ಸಮಯ ಮೀಸಲಿಡಬೇಕೆಂದು ಕೋರಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net