ಭದ್ರಾ ಹಿನ್ನೀರಿಗೆ 7 ಲಕ್ಷ ಮೀನು ಮರಿ

fish
ಎನ್.ಆರ್.ಪುರ ತಾಲೂಕು ರಾವೂರು ಮೀನು ಕ್ಯಾಂಪ್ ಬಳಿಯ ಭದ್ರಾ ಹಿನ್ನೀರಿಗೆ ಮೀನುಮರಿಗಳನ್ನು ಬಿಡುವ ಕಾರ್ಯಕ್ರಮಕ್ಕೆ ಶಾಸಕ ಟಿ.ಡಿ.ರಾಜೇಗೌಡ ಚಾಲನೆ ನೀಡಿದರು. ಪ್ರಕಾಶ್, ಬಿನು, ಪ್ರಶಾಂತ ಶೆಟ್ಟಿ ಇತರರಿದ್ದರು.
Published on

ಎನ್.ಆರ್.ಪುರ: ತಾಲೂಕಿನ ಭದ್ರಾ ಹಿನ್ನೀರಿಗೆ 7 ಲಕ್ಷ ಮೀನು ಮರಿ ಬಿಡುವ ಕಾರ್ಯಕ್ರಮಕ್ಕೆ ಶಾಸಕ ಟಿ.ಡಿ.ರಾಜೇಗೌಡ ಶನಿವಾರ ಲಿಂಗಾಪುರ ಗ್ರಾಮದ ಮೀನು ಕ್ಯಾಂಪ್ ಸಮೀಪದ ಭದ್ರಾ ಹಿನ್ನೀರಿಗೆ ಮೀನು ಮರಿಗಳನ್ನು ಬಿಡುವ ಮೂಲಕ ಚಾಲನೆ ನೀಡಿದರು.
ಮೀನುಗಾರಿಕೆ ಇಲಾಖೆಯ ಅಧಿಕಾರಿ ಪ್ರಕಾಶ್, ಗ್ರಾಪಂ ಸದಸ್ಯ ಬಿನು, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ, ಜಿಪಂ ಮಾಜಿ ಸದಸ್ಯ ಪಿ.ಆರ್.ಸದಾಶಿವ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಇ.ಸಿ.ಜೋಯಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಬಿಳಾಲುಮನೆ ಉಪೇಂದ್ರ, ಮುಖಂಡ ದೇವಂತಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net