ಗಾಂಜಾ ಮಾರಾಟ ಮಾಡುತ್ತಿದ್ದ ಭದ್ರಾವತಿಯ ಇಬ್ಬರ ಬಂಧನ

11-RNR-10
Published on

ಹಾವೇರಿ: ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿಯ ಸೈಬರ್ ಕ್ರೈಂ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಂಡಾರಹಳ್ಳಿಯ ಅಭಿಲಾಷ ನೀಲಂಠಪ್ಪ (27), ಅಜಯ ಕೃಷ್ಣಮೂರ್ತಿ (24) ಬಂಧಿತ ಆರೋಪಿಗಳು. ಇವರಿಂದ 22 ಸಾವಿರ ರೂ. ಮೌಲ್ಯದ 458 ಗ್ರಾಂ ಗಾಂಜಾ, ತೂಕದ ಮಷಿನ್, 2 ಮೊಬೈಲ್, 1 ಆಟೋರಿಕ್ಷಾ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೈಬರ್ ಕ್ರೈಂ ಠಾಣೆ ಸಿಪಿಐ ಶಿವಶಂಕರ ನೇತೃತ್ವದ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net