VIDEO VIRAL | ಕಣದಿಂದ ಹಿಂದೆ ಸರಿಯುವುದಾಗಿ ಹೇಳಿಲ್ಲವೆಂದ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ ರಾವ್

bhaskar rao video
Published on

ಬೆಂಗಳೂರು: ಪಕ್ಷದ ಕಾರ್ಯಕರ್ತರ ಮನವೊಲಿಕೆಗಾಗಿ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿ ಸುನೀಲ್ ವೆಂಕಟೇಶ್ ಅವರ ಮನೆಗೆ ಬಂದ ಭಾಸ್ಕರ್ ರಾವ್ ಶನಿವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರ.

ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ  ವರಿಷ್ಠರ ಗಮನಕ್ಕೆ ತಂದು ನಾನು ಕಣದಿಂದ ಹಿಂದೆ ಸರಿಯುವುದಾಗಿ ಭಾಸ್ಕರ್ ರಾವ್ ಪರೋಕ್ಷವಾಗಿ ಕಾರ್ಯಕರ್ತರಿಗೆ ಹೇಳಿದರು ಎನ್ನಲಾದ ವಿಡಿಯೋ ವೈರಲ್ ಆಗಿದೆ.

ವಿಡಿಯೋ ವೈರಲ್ ಆಗಿರುವ ಬಗ್ಗೆ ಭಾಸ್ಕರ್ ರಾವ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಕಣದಿಂದ ಹಿಂದೆ ಸರಿಯುವುದಾಗಿ ಹೇಳಿಲ್ಲ. ಸಹಕಾರ ಕೋರಿದ್ದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 8 ವರ್ಷದಿಂದ ಪಕ್ಷ ಸಂಘಟನೆ ಮಾಡಿ  ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿ ಸುನೀಲ್ ವೆಂಕಟೇಶ್ ಪೈಪೋಟಿ ನೀಡಿದ್ದರು.

 ಸುನೀಲ್ ವೆಂಕಟೇಶ್ ಬದಕು  ಭಾಸ್ಕರ್ ರಾವ್ ಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಗೋ ಬ್ಯಾಕ್ ಭಾಸ್ಕರ್ ರಾವ್ ಅಭಿಯಾನ ಪ್ರತಿಭಟನೆಯನ್ನು ಬೆಂಬಲಿಗರು ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net