ಭವಾನಿ ರೇವಣ್ಣ ಮಧ್ಯಂತರ ಜಾಮೀನು ವಿಸ್ತರಣೆ

highcourt
Published on

ಬೆಂಗಳೂರು: ಲೈಂಗಿಕ ಹಗರಣದ ಸಂತ್ರಸ್ತೆ ಅಪಹರಣ ಆರೋಪದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಈ ಹಿಂದೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿದೆ.

ಪ್ರಕರಣ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಅಲ್ಲದೆ, ಅಲ್ಲಿಯವರೆಗೂ ಈ ಹಿಂದೆ ಮಂಜೂರು ಮಾಡಿದ್ದ ಮದ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಭವಾನಿ ಪರ ವಕೀಲರು, ಅರ್ಜಿದಾರರು ತನಿಖಾಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ, ಪೊಲೀಸರಿಗೆ ಎಲ್ಲ ರೀತಿಯೂ ಸಹಕಾರ ನೀಡುತ್ತಿದ್ದಾರೆ. ಆದ್ದರಿಂದ ಬಂಧನ ಮಾಡುವ ಅಗತ್ಯವಿಲ್ಲ ಎಂದು ವಿವರಿಸಿದರು. ಸರ್ಕಾರದ ಪರ ವಾದ ಮಂಡಿಸಿ, ಅರ್ಜಿದಾರ ಭವಾನಿ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಯಾವುದೇ ಪ್ರಶ್ನೆಗೂ ಸರಿಯಾದ ಉತ್ತರ ನೀಡುತ್ತಿಲ್ಲ.

ಇಡೀ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಪ್ರಮುಖ ಆರೋಪಿಯಾದ್ದಾರೆ. ಅವರು ಸಂತ್ರಸ್ತೆಯೆ ಅಪಹರಣಕ್ಕೆ ಪ್ರಮುಖ ಪಾತ್ರವಹಿಸಿದ್ದಾರೆ. ಹಾಗಾಗಿ ಸೂಕ್ತ ರೀತಿಯಲ್ಲಿ ಸಹಕಾರ ನೀಡಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಬೇಕಾಗಿದೆ. ಹೀಗಾಗಿ ಈಗಾಗಲೇ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದಪಡಿಸಬೇಕು ಎಂದು ಕೋರಿದರು.

ಅರ್ಜಿದಾರರಯ ನ್ಯಾಯಾಲಯದ ಆದೇಶದಂತೆ ಮೂರು ದಿನಗಳ ಕಾಲ ಹಾಜರಾಗಿ ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ವಿವರಣೆ ನೀಡಿದ್ದಾರೆ. ಆದ್ದರಿಂದ ನಿರೀಕ್ಷಣಾ ಜಾಮೀನು ತಿರಸ್ಕರಿಸಬೇಕು ಎಂಬ ಸರ್ಕಾರದ ಪರ ವಾದವನ್ನು ತಿರಸ್ಕರಿಸುತ್ತಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಣೆ ಮಾಡಲಾಗುತ್ತಿದೆ ಎಂದು ಪೀಠ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net