ಟಿ.ಸುನಂದಮ್ಮ ಪ್ರಶಸ್ತಿಗೆ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಆಯ್ಕೆ

Sunandamma Bhuvaneshwari Hegade
Published on

ಬೆಂಗಳೂರು: ಟಿ. ಸುನಂದಮ್ಮ ಸ್ಮಾರಕ ಪ್ರತಿಷ್ಠಾನ ನೀಡುವ 2022ನೇ ಸಾಲಿನ 'ಟಿ.ಸುನಂದಮ್ಮ ಪ್ರಶಸ್ತಿ'ಗೆ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಉಪಾಧ್ಯಕ್ಷೆ ಡಾ.ವಸುಂಧರಾ ಭೂಪತಿ ತಿಳಿಸಿದ್ದಾರೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಮಾ. 18ರ ಶನಿವಾರ ಸಂಜೆ 5ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಸಿದ್ಧ ಹಾಸ್ಯ ಸಾಹಿತಿ ಎಂ.ಎಸ್. ನರಸಿಂಹಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಅಲ್ಲದೆ ಖ್ಯಾತ ಹಾಸ್ಯ ಸಾಹಿತಿ ಡುಂಡಿರಾಜ್ ಅಂದು "ಟಿ. ಸುನಂದಮ್ಮ ಸಾಹಿತ್ಯ ಸಂಪುಟ 3" ಮತ್ತು ಹಿರಿಯ ಲೇಖಕಿ ಎಲ್.ವಿ. ಶಾಂತಕುಮಾರಿ "ನಾನು ಕಂಡಂತೆ ಟಿ. ಸುನಂದಮ್ಮ" ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಎಂ. ನರಸಿಂಹಮೂರ್ತಿ ಕಾಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಶಸ್ತಿ 30 ಸಾವಿರ ರೂಪಾಯಿ ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net