ಮದುವೆಗೂ ಮುನ್ನವೇ ಭಾವಿ ಪತಿಯ ಹೊಸ ಮನೆ ಗೃಹ ಪ್ರವೇಶ ಮಾಡಿದ ಹರ್ಷಿಕಾ ಪೂಣಚ್ಚ

Harshika Poonacha
Published on

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ದಾಂಪತ್ಯ ಜೀವನಕ್ಕೆ ಕಾಲುಡಲು ಸಜ್ಜಾಗಿದ್ದಾರೆ. ಮದುವೆ ಇನ್ನೇನು ಕೆಲವು ದಿನ ಬಾಕಿ ಇರುವಾಗಲೇ ಭಾವಿ ಪತಿಯ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ. ಈ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಹರ್ಷಿಕಾ ಮತ್ತು ಭುವನ್ ವಿವಾಹವಾಗುತ್ತಿದ್ದು, ಇದೇ ತಿಂಗಳ 24 ಹಾಗೂ 25ರಂದು ಈ ಯುವಜೋಡಿಯ ವಿವಾಹ ಸಮಾರಂಭ ಕೊಡಗಿನಲ್ಲಿ ಅದ್ಧೂರಿಯಾಗಿ ಕೊಡವ ಸಂಪ್ರದಾಯದಂತೆ ನಡೆಯಲಿದೆ.

ಹರ್ಷಿಕಾ ಪೂಣಚ್ಚ ಮದುವೆಗೂ ಮುನ್ನವೇ ಭುವನ್ ಅವರ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ. ಭುವನ್ ಹರ್ಷಿಕಾಗಾಗಿಯೇ ತೋಟದ ಮನೆ ಕಟ್ಟಿಸಿದ್ದಾರೆ. ಈ ಮನೆಯ ಗೃಹ ಪ್ರವೇಶ ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಬಾವಿ ಪತ್ನಿ ಹರ್ಷಿಕಾ ಪೂಣಚ್ಚ ಎಂಟ್ರಿಕೊಟ್ಟಿದ್ದಾರೆ. ಭುವನ್ ಕೊಡವ ಶೈಲಿಯಲ್ಲಿ ಗನ್ ಹಿಡಿದು ಗುಂಡು ಹಾರಿಸಿ ಶುಭಕಾರ್ಯ ಶುರು ಮಾಡಿದ್ದಾರೆ. ಈ ಸಂಭ್ರಮದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿವೆ.

ಹರ್ಷಿಕಾ ಹಾಗೂ ಭುವನ್ ಪೊನ್ನಣ್ಣ ಅವರುಗಳು ತಮ್ಮ ಮದುವೆಯ ಆಹ್ವಾನ ಪತ್ರಿಕೆ ವಿತರಣೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಚಿತ್ರರಂಗದ ಹಲವು ಗಣ್ಯರನ್ನು ತಮ್ಮ ವಿವಾಹಕ್ಕೆ ಹರ್ಷಿಕಾ ಹಾಗೂ ಭುವನ್ ಆಹ್ವಾನಿಸಿದ್ದಾರೆ, ಆಹ್ವಾನಿಸುತ್ತಿದ್ದಾರೆ. ಹಿರಿಯ, ಕಿರಿಯ ಹೀಗೆ ಎಲ್ಲ ನಟ-ನಟಿಯರನ್ನು ತಮ್ಮ ಮದುವೆಗೆ ಈ ಜೋಡಿ ಆಹ್ವಾನಿಸುತ್ತಿದ್ದಾರೆ.

ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ. ತಮ್ಮ ಪ್ರೀತಿಯನ್ನು ಬಹುತೇಕ ಗುಟ್ಟಾಗಿಯೇ ಇರಿಸಿದ್ದ ಈ ಜೋಡಿ ಇದೀಗ ಮದುವೆ ಆಗುತ್ತಿದ್ದಾರೆ. ಆಗಸ್ಟ್ 24 ಹಾಗೂ 25ರಂದು ಕೊಡಗಿನಲ್ಲಿ ಅದ್ಧೂರಿಯಾಗಿ ಇವರ ಮದುವೆ ನಡೆಯಲಿದೆ. ಇಬ್ಬರೂ ಕೊಡವರಾಗಿದ್ದು, ಕೊಡವ ಸಂಪ್ರದಾಯದಂತೆಯೇ ಈ ಇಬ್ಬರ ಮದುವೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net