VIDEO| ಮುಗ್ಗರಿಸಿ ಬಿದ್ದ ಅಮೆರಿಕಾ ಅಧ್ಯಕ್ಷ ಜೋ ಬೈಡನ್!

joebiden
Published on

ಅಮೆರಿಕಾ: ಪದವಿ ಪ್ರದಾನ ಕಾರ್ಯಕ್ರಮವೊಂದರ ವೇದಿಕೆಯ ಮೇಲೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್​ ಮುಗ್ಗರಿಸಿ ಬಿದ್ದಿದ್ದಾರೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್,​ ಕೊಲೊರಾಡೋ ಸ್ಪ್ರಿಂಗ್ಸ್‌ನಲ್ಲಿ ಏರ್ ಫೋರ್ಸ್ ಅಕಾಡೆಮಿ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ವೇಳೆ ವೇದಿಕೆಯ ಮೇಲೆ ಎಡವಿ ಬಿದ್ದಿದ್ದಾರೆ.

90 ನಿಮಿಷಗಳ ಕಾಲ ಕೆಡೆಟ್‌ಗಳನ್ನು ಅಭಿನಂದಿಸಿ ಪ್ರಮಾಣಪತ್ರಗಳನ್ನು ವಿತರಿಸಿದ ನಂತರ ಅವರು ತಮ್ಮ ಆಸನಕ್ಕೆ ತೆರಳುತ್ತಿದ್ದರು. ಆದರೆ, ಈ ವೇಳೆ ಸಮತೋಲನ ಕಳೆದುಕೊಂಡು ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಏರ್‌ಫೋರ್ಸ್‌ ಅಧಿಕಾರಿಗಳು ಎದ್ದೇಳಲು ಸಹಕರಿಸಿದ್ದಾರೆ. ನಂತರ ಅಲ್ಲಿಂದ ಕ್ಷೇಮವಾಗಿ ನಡೆದುಕೊಂಡು ಶ್ವೇತ ಭವನಕ್ಕೆ ತೆರಳಿದರು.

ಅಧ್ಯಕ್ಷರು ಗಾಯಗೊಂಡಿಲ್ಲ, ಫಿಟ್‌ ಆಗಿದ್ದಾರೆ ಎಂಬುದಾಗಿ ಶ್ವೇತಭವನದ ಸಂವಹನ ವಿಭಾಗದ ನಿರ್ದೇಶಕ ಬೆನ್ ಲಾಬೋಲ್ಟ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

80 ವರ್ಷದ ಬೈಡನ್​ ದೇಶದ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದು, ಈ ರೀತಿ ಮುಗ್ಗರಿಸಿ ಬೀಳುತ್ತಿರುವುದು ಇದೇ ಮೊದಲಲ್ಲ. ಬೈಡನ್‌ ಇತ್ತೀಚೆಗೆ ಜಪಾನ್‌ನಲ್ಲಿ ನಡೆದ G7 ಶೃಂಗಸಭೆಯಲ್ಲೂ ಎಡವಿದ್ದರು, ಹಿರೋಷಿಮಾದ ಇಟ್ಸುಕುಶಿಮಾ ದೇಗುಲದಲ್ಲಿ ಸಣ್ಣ ಮೆಟ್ಟಿಲುಗಳಲ್ಲಿ ಅವಸರದಿಂದ ಹೋಗುತ್ತಿದ್ದಾಗಲೂ ಎಡವಿ ಬಿದ್ದಿದ್ದರು. ಇದೀಗ 3ನೇ ಬಾರಿ ಬೈಡನ್‌ ಎಡವಿ ಬಿದ್ದ ಈ ದೃಶ್ಯ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net