ಜಾಮೀನು ರದ್ದು ವಿಚಾರ: ಭವಾನಿ ರೇವಣ್ಣಗೆ ಬಿಗ್ ರಿಲೀಫ್​ ಕೊಟ್ಟ ಸುಪ್ರೀಂಕೋರ್ಟ್​ | Bhavani Revanna

bhavani revanna
Published on

ಬೆಂಗಳೂರು: ಈ ಹಿಂದೆ ಸಂತ್ರಸ್ತೆ ಕಿಡ್ನ್ಯಾಪ್​ ಪ್ರಕರಣದಲ್ಲಿ ಹೈಕೋರ್ಟ್​ ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್​ ನೀಡಿದ್ದ ಜಾಮೀನನ್ನು ಪ್ರಶ್ನಿಸಿದ್ದ ಎಸ್​​ಐಟಿ, ಬೇಲ್ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಆದ್ರೆ, ಇದನ್ನು ತಿರಸ್ಕರಿಸಿರುವ ನ್ಯಾಯಾಲಯ, ಇದೀಗ ಭವಾನಿ ರೇವಣ್ಣಗೆ (Bhavani Revanna) ಬಿಗ್ ರಿಲೀಫ್ ನೀಡಿದೆ.

ಜೂನ್​ 18ರಂದು ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಕೇಸ್​ನ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ ಹೈಕೋರ್ಟ್​ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಮೂಲಕ ಹಾಸನ, ಮೈಸೂರಿಗೆ ಪ್ರವೇಶಿಸಿದಂತೆ ಕೋರ್ಟ್​ ತಾಕೀತು ಮಾಡಿತ್ತು. ಉಚ್ಚನ್ಯಾಯಾಲಯ ನೀಡಿದ ಜಾಮೀನನ್ನು ಪ್ರಶ್ನಿಸಿದ ಎಸ್​ಐಟಿ, ಸುಪ್ರೀಂಕೋರ್ಟ್​ಗೆ ಭವಾನಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಮೇಲ್ಮನವಿ ಸಲ್ಲಿಸಿತ್ತು.

ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಭವಾನಿ ರೇವಣ್ಣಗೆ ಬಿಗ್ ರಿಲೀಫ್ ನೀಡುವ ಮೂಲಕ ಎಸ್​ಐಟಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net