ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಬಿಗ್ ರಿಲೀಫ್​; ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್​

ವಿಜಯವಾಣಿ (50)
Published on

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧ ಅರ್ಜಿ ಸಲ್ಲಿಸಿದ್ದ ಸಿಬಿಐ ಇಂದು ಕೋರ್ಟ್​ನಲ್ಲಿ ವಿಚಾರಣೆಗೆ ಹಾಜರಾಯಿತು. ಈ ವೇಳೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ತೀರ್ಮಾನಿಸಬೇಕು ಎಂದು ತಿಳಿಸುವ ಮೂಲಕ ಡಿಕೆಶಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಈ ಕೇಸ್​ನಲ್ಲಿ ಹೈಕೋರ್ಟ್​ ತೀರ್ಪು ನೀಡುವುದು ಸೂಕ್ತವಲ್ಲ. ರಾಜ್ಯ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ಬಳಿಯೇ ತೀರ್ಮಾನವಾಗಬೇಕು ಎಂದು ಉಚ್ಚನ್ಯಾಯಾಲಯ ಉಲ್ಲೇಖಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಾತನಾಡಿದ್ದ ಡಿಕೆಶಿ, ನನಗೆ ದೇವರ ಬಗ್ಗೆ, ನ್ಯಾಯಾಲಯದ ಬಗ್ಗೆ ಅಪಾರ ನಂಬಿಕೆ ಇದೆ. ಅವರು ಏನು ಕೊಟ್ಟರೂ ಅದನ್ನು ನಾನು ಪ್ರಸಾದ ಎಂದು ಸ್ವೀಕಾರ ಮಾಡ್ತೀನಿ ಎಂದಿದ್ದರು.

ಒಂದೆಡೆ ಡಿಕೆಶಿಗೆ ಕೋರ್ಟ್​ ತಾತ್ಕಾಲಿಕ ರಿಲೀಫ್ ನೀಡಿದರೆ, ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದವನ್ನೇ ಹಟ್ಟುಹಾಕಿದ್ದ ಮುಡಾ ನಿವೇಶನ ಹಂಚಿಕೆ ಗೋಲ್ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ವಿಚಾರಣೆಯನ್ನು ಇಂದೇ ನಡೆಸಿದ ನ್ಯಾಯಾಲಯ ಇದೀಗ ವಿಚಾರಣೆಯನ್ನು ಆಗಸ್ಟ್​ 31ಕ್ಕೆ ಮುಂದೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net