ಅಕ್ರಮ ಅಸ್ತಿ ಪ್ರಕರಣದಲ್ಲಿ ಡಿಕೆಶಿಗೆ ಬಿಗ್ ರಿಲೀಫ್; ಹೈಕೋರ್ಟ್ ಆದೇಶದಲ್ಲಿ ಸದ್ಯ ಮಧ್ಯಪ್ರವೇಶ ಮಾಡೋದಿಲ್ಲವೆಂದ ಸುಪ್ರೀಂಕೋರ್ಟ್

dks
Published on

ಬೆಂಗಳೂರು: ಆದಾಯ ಮೀರಿ ಅಕ್ರಮವಾಗಿ ಅಸ್ತಿ ಸಂಪಾದನೆ ಪ್ರಕರಣದಲ್ಲಿ ಆರೋಪಿ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಮತ್ತರವಾದ ಹೇಳಿಕೆಯೊಂದಿಗೆ ರಿಲೀಫ್​ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವುಗೊಳಿಸಲು ಸಿಬಿಐ ಮನವಿ ಮಾಡಿತ್ತು. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ನಾವು ಈಗ ಹಸ್ತಕ್ಷೇಪ ಮಾಡುವುದಿಲ್ಲ. ಹೈಕೋರ್ಟ್ ಶೀಘ್ರದಲ್ಲಿ ಈ ಪ್ರಕರಣ ಇತ್ಯರ್ಥ ಪಡಿಸಲಿ ಎಂದು ಸುಪ್ರೀಂಕೋರ್ಟ್ ಹೇಳುವ ಮೂಲಕವಾಗಿ ಡಿಕೆ ಶಿವಕುಮಾರ್​ ಅವರಿಗೆ  ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net