ಗಾಲಿ ಜನಾರ್ದನ ರೆಡ್ಡಿಗೆ ಬಿಗ್​​ ರಿಲೀಫ್: ಜಾಮೀನು ಮಂಜೂರು | Bail Granted

dk - 2025-06-11T115309.160
Published on

Bail Granted: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಹಾಗೂ ಹಾಲಿ ಗಂಗಾವತಿ ಬಿಜೆಪಿ ಶಾಸಕ ಜಿ.ಜನಾರ್ದನರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಿ ಬುಧವಾರ ಜಾಮೀನು ಮಂಜೂರು ಮಾಡಿದೆ.

ಆಂಧ್ರ ಗಡಿಯಲ್ಲಿನ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್(ಒಎಂಸಿ) ಕಂಪನಿಯ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ 884 ಕೋಟಿ ರೂ. ಮೌಲ್ಯದ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣಿಕೆ ಮಾಡಿದ್ದ ಆರೋಪ ಹಿನ್ನೆಲೆ ಕಳೆದ 13 ವರ್ಷಗಳಿಂದ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ವರದಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೈದರಾಬಾದ್​ನ ಸಿಬಿಐ ನ್ಯಾಯಾಲಯ ಮೇ.06 ರಂದು ಜನಾರ್ದನರೆಡ್ಡಿಗೆ ಏಳು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿತು. ಅಲ್ಲದೆ, ಇತ್ತೀಚಿಗೆ ವಿವಿಧ ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು.

ಬಳಿಕ ಸಿಬಿಐ ಕೋರ್ಟ್ ತೀರ್ಪು ಪ್ರಶ್ನಿಸಿ ರೆಡ್ಡಿ ವಕೀಲರು ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಗಾಲಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳು, ಭಾರತ ಬಿಟ್ಟು ಹೋಗಲು ತಡೆ ವಿಧಿಸಿ ಜನಾರ್ದನ ರೆಡ್ಡಿ ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆಯೂ ಕೋರ್ಟ್ ಆದೇಶ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net