

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ (Bigg Boss) ಸೀಸನ್ 11 ದಿನ ಕಳೆದಂತೆ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನೇ ನೀಡುತ್ತಿದೆ. ಇನ್ನೂ ಕಾರ್ಯಕ್ರಮ ಶುರುವಾಗಿ ಆರನೇ ವಾರವಾಗುತ್ತ ಬಂದಿದ್ದು, ಈ ವಾರ ಸ್ಫರ್ಧಿಗಳಿಗೆ ನೀಡಿರುವ ಟಾಸ್ಕ್ ಮಾತ್ರ ಎಲ್ಲರ ಗಮನ ಸೆಳೆಯುತ್ತಿದೆ.
ಬಿಗ್ಬಾಸ್ (Bigg Boss) ಮನೆಯಲ್ಲಿ ಈ ವಾರ ಸ್ಫರ್ಧಿಗಳಿಗೆ ವಿವಿಧ ಟಾಸ್ಕ್ಗಳನ್ನು ನೀಡಲಾಗುತ್ತಿದ್ದು, ಈ ಟಾಸ್ಕ್ನಲ್ಲಿ ಗೆದ್ದ ತಂಡಕ್ಕೆ ಲವು ಆಯ್ಕೆಗಳು ಸಿಗುತ್ತಿವೆ. ಈಗ ಟಾಸ್ಕ್ ಗೆದ್ದ ಒಂದು ತಂಡಕ್ಕೆ ಸೇವೆ ಭಾಗ್ಯ ಸಿಕ್ಕಿದೆ. ಸೋತ ತಂಡದವರು ಸೇವೆ ಮಾಡಿದ್ದು, ಇದಕ್ಕೆ ಸಂಬಂಧಿಸಿದ ಪ್ರೋಮೋವನ್ನು ಬಿಡುಗಡೆ ಮಾಡಲಾಗಿದೆ.
ಬಿಡುಗಡೆಯಾಗಿರುವ ಪ್ರೋಮೋ ನೋಡುವುದಾದರೆ, ಭವ್ಯಾ, ಗೋಲ್ಡ್ ಸುರೇಶ್, ಉಗ್ರಂ ಮಂಜು ಹಾಗೂ ಧನರಾಜ್ ಮನೆಮಂದಿ ಹೇಳಿದಂತೆ ಕೆಲಸ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಧನರಾಜ್, ಭವ್ಯಾ ಹಾಗೂ ಸುರೇಶ್ ನಡುವಿನ ನಂಭಾಷಣೆ ಹಾಸ್ಯಾಸ್ಟದವಾಗಿದ್ದು, ಇಂದಿನ ಸಂಚಿಕೆ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುವುದು ಖಾತ್ರಿಯಾಗಿದೆ.
ಭರಪೂರ ಮನರಂಜನೆಯ ಜೊತೆಗೆ ವಿವಾದಗಳನ್ನು ಹುಟ್ಟು ಹಾಕುವ ಬಿಗ್ಬಾಸ್ (Bigg Boss), ಕಿರುತೆರೆ ಲೋಕದ ಜನಪ್ರಿಯ ಶೋಗಳಲ್ಲಿ ಒಂದೆಂದರೆ ತಪ್ಪಾಗಲಾರದು. ಪ್ರೀತಿ, ಸ್ನೇಹ ಸಂಬಂಧಗಳಿಗೆ ಈ ಶೋ ಬೆಸುಗೆಯಾಗುತ್ತದೆ. ಇಲ್ಲಿ ನಗು, ಕಣ್ಣೀರು, ಕೋಪ, ಮುನಿಸು ಮತ್ತು ಮನಸ್ತಾಪಗಳ ಮಿಶ್ರಣವು ಇದೆ. ಟಾಸ್ಕ್ ನೀಡುವುದರ ಜೊತೆಗೆ ಜೀವನದ ಪಾಠವನ್ನು ಹೇಳಲಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ವಾರದ ಕೊನೆಯಲ್ಲಿ ನಟ ಕಿಚ್ಚ ಸುದೀಪ್ ಸರಿ-ತಪ್ಪುಗಳ ತಿದ್ದುವಿಕೆ ಶೋಗೆ ಹೊಸ ಆಯಾಮವನ್ನು ತಂದುಕೊಡುತ್ತದೆ. ಈ ಎಲ್ಲ ಕಾರಣಗಳಿಂದ ಈ ಶೋ ವಿಶೇಷ ಎನಿಸಿಕೊಂಡಿದ್ದು, ಕಿರುತೆರೆ ಲೋಕದಲ್ಲಿ ಸಿಕ್ಕಾಪಟ್ಟೆ ಪಾಪ್ಯೂಲರ್ ಆಗಿದೆ.