BB Telugu: ತೆಲುಗು ಬಿಗ್ ಬಾಸ್​ ಕಿರೀಟ ಗೆದ್ದ ಕನ್ನಡದ ಮೈಸೂರಿನ ಯುವಕ ನಿಖಿಲ್

big boss
Published on
BB Telugu : ಬಿಗ್​ಬಾಸ್​ ಕಾರ್ಯಕ್ರಮ  ತೆಲಗು, ಹಿಂದಿ ಸೇರಿದಂತೆ ಕನ್ನಡದಲ್ಲೂ ಜನ ಮನ್ನಣೆ ಪಡೆದುಕೊಂಡಿರುವ ಕಾರ್ಯಕ್ರಮವಾಗಿದೆ.  ‘ತೆಲುಗು ಬಿಗ್ ಬಾಸ್ ಸೀಸನ್ 8’ರಲ್ಲಿ ಕನ್ನಡದ ಹುಡುಗ ನಿಖಿಲ್ ಮಳಿಯಕ್ಕಲ್ ಗೆದ್ದಿದ್ದಾರೆ.

ರಾಮ್ ಚರಣ್ ಅವರು ಚೆಕ್ ಹಾಗೂ ಅವಾರ್ಡ್​ನ ನಿಖಿಲ್​ಗೆ ನೀಡಿದ್ದಾರೆ. ಬೇರೆ ಭಾಷೆಗೆ ತೆರಳಿ ಕನ್ನಡದ ಹುಡುಗ ಗೆದ್ದಿರುವುದರಿಂದ ದಾಖಲೆ ಸೃಷ್ಟಿ ಆಗಿದೆ.

ನಿಖಿಲ್ ಅವರು ಮೂಲತಃ ಕರ್ನಾಟಕದವರು. ಅವರು ಹುಟ್ಟಿದ್ದು ಮೈಸೂರಿನಲ್ಲಿ. ಅವರಿಗೆ ತೆಲುಗು ಚಿತ್ರರಂಗದ ಜೊತೆ, ಅಲ್ಲಿನ ಕಿರುತೆರೆ ಜೊತೆ ಒಳ್ಳೆಯ ನಂಟು ಬೆಳೆದಿದೆ. ಅವರು ನಟ ಹಾಗೂ ಯೂಟ್ಯೂಬರ್. ನಿಖಿಲ್​ಗೆ ಇನ್ನೂ 27 ವರ್ಷ. ಅವರು 2016ರಲ್ಲಿ ‘ಊಟಿ’ ಹೆಸರಿನ ಕನ್ನಡ ಸಿನಿಮಾ ಮಾಡಿದರು.  2019ರಲ್ಲಿ ಪ್ರಸಾರ ಆರಂಭಿಸಿದ ತೆಲುಗಿನ ‘ಗೋರಿಂಟಕು’ ಧಾರಾವಾಹಿ ಮೂಲಕ ಅವರು ತೆಲುಗು ರಂಗದಲ್ಲಿ ಫೇಮಸ್ ಆದರು.

ನಿಖಿಲ್ ಅವರು ಸೆಪ್ಟೆಂಬರ್ 1ರಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದರು. ಬಿಗ್ ಬಾಸ್​ನಲ್ಲಿ ಭರ್ಜರಿ ಮನರಂಜನೆ ನೀಡಿ ಗಮನ ಸೆಳೆದರು. ಈಗ ಬಿಗ್ ಬಾಸ್ ವಿನ್ ಆಗಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಅವಾರ್ಡ್​ ಹಣ ಸಿಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net