

Biggboss| ಸೋಷಿಯಲ್ ಮೀಡಿಯಾದಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿದ್ದ ಬಿಗ್ಬಾಸ್ ಸ್ಪರ್ಧಿ ರಜತ್ ಕಿಶನ್ ಹಾಗೂ ವಿನಯ್ಗೌಡ ಇಬ್ಬರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಬ್ಬರಿಗೂ ಕೂಡ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ 24ನೇ ACJM ಕೋರ್ಟ್ ಆದೇಶ ಹೊರಡಿಸಿದೆ.
ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ಗೌಡ ಮತ್ತು ರಜತ್ ಇಬ್ಬರೂ ರೀಲ್ಸ್ ಮಾಡುವ ಸಂದರ್ಭದಲ್ಲಿ ಮಚ್ಚು ಹಿಡಿದುಕೊಂಡು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಹೀಗಾಗಿ ಇವರಿಬ್ಬರ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ FIR ದಾಖಲಾಗಿತ್ತು. ಇದಾದ ಬಳಿಕ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ಕೊಟ್ಟಿದ್ದರು. ಆದರೆ, ರಜತ್ ಹಾಗೂ ವಿನಯ್ ಫೈಬರ್ ಮಚ್ಚು ನೀಡಿ ಪೊಲೀಸರಿಗೆ ಯಾಮಾರಿಸಿದ್ದರು. ಹೀಗಾಗಿ ಪೊಲೀಸರು ಆ ರಿಯಲ್ ಮಚ್ಚಿಗಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಪ್ರಕರಣದಲ್ಲಿ ಇಬ್ಬರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದ್ದು, ತಲಾ 10 ಸಾವಿರ ರೂ. ಶ್ಯೂರಿಟಿ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ.