ಬಿಹಾರ ಸರ್ಕಾರದ ಪೂರ್ವಭಾವಿ ಪರೀಕ್ಷೆ ಬರೆಯುವವರಿಗೆ ಏಕರೂಪ ಶುಲ್ಕ ಘೋಷಿಸಿದ ಸಿಎಂ ನಿತೀಶ್​ ಕುಮಾರ್​ |Nitish Kumar

Nitish Kumar
Published on

Nitish Kumar: ರಾಜ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಗಳಿಗೆ ಬಿಹಾರ ಸರ್ಕಾರ 100 ರೂ.ಗಳ ಏಕರೂಪ ಶುಲ್ಕವನ್ನು ಘೋಷಿಸಿದ್ದು, ಮುಖ್ಯ ಪರೀಕ್ಷೆಗೆ ಆಯ್ಕೆಯಾದವರು ಯಾವುದೇ ಹಣವನ್ನು ಭರಿಸುವ ಅವಶ್ಯಕತೆ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ (ಆಗಸ್ಟ್​​ 15) ಟ್ವೀಟ್​​ ಮೂಲಕ ತಿಳಿಸಿದ್ದಾರೆ.

ತಮ್ಮ ಎಕ್ಸ್​​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಸಿಎಂ, ರಾಜ್ಯ ಮಟ್ಟದ ಸರ್ಕಾರಿ ಉದ್ಯೋಗಗಳಿಗಾಗಿ ಎಲ್ಲಾ ಆಯೋಗಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಾಥಮಿಕ ಪರೀಕ್ಷೆಗಳ (ಪಿಟಿ) ಶುಲ್ಕದಲ್ಲಿ ಏಕರೂಪತೆಯನ್ನು ತರಲು ಮತ್ತು ಅಭ್ಯರ್ಥಿಗಳಿಗೆ ಗಮನಾರ್ಹ ಶುಲ್ಕ ರಿಯಾಯಿತಿಗಳನ್ನು ಒದಗಿಸುವ ನಿರ್ಧಾರ ತೆಗೆದುಕೊಳ್ಳಲು ನನಗೆ ಸಂತೋಷವಾಗಿದೆ, ಈ ನಿರ್ಧಾರವು ಸರ್ಕಾರಿ ಉದ್ಯೋಗಗಳನ್ನು ಬಯಸುವ ಲಕ್ಷಾಂತರ ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು.

ರಾಜ್ಯದ ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ಒದಗಿಸುವುದು ಆರಂಭದಿಂದಲೂ ತಮ್ಮ ಸರ್ಕಾರದ ಆದ್ಯತೆಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೇವಲ 100 ರೂ. ಶುಲ್ಕ ವಿಧಿಸಲು ಸೂಚನೆಗಳನ್ನು ನೀಡಲಾಗಿದೆ. ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಇನ್ನು ಮುಂದೆ ಯಾವುದೇ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಬರೆದುಕೊಂಡಿದ್ದಾರೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net