

ಬಿಹಾರಕ್ಕೆ ವಿಶೇಷ ಸ್ಥಾನಮಾನ ಘೋಷಿಸುವಂತೆ ಕೇಂದ್ರದ ನಾಯಕರಲ್ಲಿ ಮನವಿ ಮಾಡಿದ್ದೆ. ಆದರೆ ಮಂಗಳವಾರ ಮಂಡನೆಯಾಗಿರುವ ಬಜೆಟ್‌ನಲ್ಲಿ ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಅನುದಾನ ಘೋಷಣೆಯಾಗಿದ್ದು ಸಂತಸ ಮೂಡಿಸಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದ ಅಭಿವೃದ್ಧಿ ಮಟ್ಟ ತ್ವರಿತಗತಿಯಲ್ಲಿ ಏರಿಕೆಯಾಗುವುದಕ್ಕೆ ಪೂರಕವಾದ ಯೋಜನೆ ಮತ್ತು ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ ಎಂದು ಅವರು ಹೇಳಿದರು.