ಬಿಹಾರ ಚುನಾವಣೆ: ಲಾಲು ಪ್ರಸಾದ್ ಯಾದವ್ ಹಿರಿಯ ಪುತ್ರ ತೇಜ್ ಪ್ರತಾಪ್ ವಿರುದ್ಧ ಪ್ರಕರಣ ದಾಖಲು| Tej Prathap Yadav

ವಿಜಯವಾಣಿ (82)
Published on

Patna : ಬಿಹಾರ ಚುನಾವಣೆಯಲ್ಲಿ ವೈಶಾಲಿ ಜಿಲ್ಲೆಯ ಮಹುವಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ಮತ್ತು ಜನಶಕ್ತಿ ಜನತಾ ದಳದ ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್(Tej Prathap Yadav) ವಿರುದ್ಧ ಸೋಮವಾರ(ಅ. 20) ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಈ ಕುರಿತು ಮಾತನಾಡಿರುವ ಪೊಲೀಸ್ ಅಧಿಕಾರಿ, ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಸುವ ಮೆರವಣಿಗೆಯಲ್ಲಿ ಯಾದವ್ ಪೊಲೀಸ್ ಲೋಗೋ ಮತ್ತು ಬೀಕನ್ ಲೈಟ್ ಹೊಂದಿರುವ ಎಸ್‌ಯುವಿಯನ್ನು ಬಳಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಮಹುವಾ ವೃತ್ತ ಅಧಿಕಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಕೂಲಂಕುಷವಾಗಿ ಪರಿಶೀಲಿಸಿದಾಗ ವಾಹನದಲ್ಲಿ ಬಳಸಲಾದ ಪೊಲೀಸ್ ಲೋಗೋ ಮತ್ತು ಬೀಕನ್ ಲೈಟ್ ಖಾಸಗಿಯವರದ್ದಾಗಿತ್ತು ಎಂದು ಕಂಡುಬಂದಿದೆ. ಆದ್ದರಿಂದ, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮಹಿಳೆಯೊಬ್ಬರ ಜೊತೆಗಿನ ಸಂಬಂಧ ಬಯಲಿಗೆ ಬಿದ್ದ ಬಳಿಕ ಮೇ 25ರಂದು ತನ್ನ ತಂದೆಯಿಂದ ಆರು ವರ್ಷಗಳ ಕಾಲ ಆರ್‌ಜೆಡಿಯಿಂದ ಹೊರಹಾಕಲ್ಪಟ್ಟ ನಂತರ ತೇಜ್ ಪ್ರತಾಪ್ ತಮ್ಮ ಸ್ವಂತ ಪಕ್ಷವನ್ನು ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net