ಬಿಹಾರದಲ್ಲಿ ಹೆಚ್ಚಾದ ಅಪರಾಧ ಕೃತ್ಯಗಳು; ತಮ್ಮದೇ ಮೈತ್ರಿಕೂಟದ ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ! |Bihar

Untitled design (17) (2)
Published on

Bihar: ಬಿಹಾರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಮತ್ತು ನಿಯಂತ್ರಣವಿಲ್ಲದ ಆಡಳಿತವನ್ನು ನೋಡಿಯೂ ಸರ್ಕಾರವನ್ನು ಬೆಂಬಲಿಸಲು ಬೇಸರವಾಗುತ್ತಿದೆ ಎಂದು ತಮ್ಮದೇ ಮೈತ್ರಿಕೂಟದ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು, ರಾಜ್ಯಾದ್ಯಂತ ಕೊಲೆ, ದರೋಡೆ, ಅಪಹರಣ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ನಮ್ಮ ಮೈತ್ರಿ ಕೂಟ ವಿಫಲವಾಗಿದೆ. ಸರ್ಕಾರ ಅಪರಾಧಿಗಳಿಗೆ ಸಂಪೂರ್ಣವಾಗಿ ಬೆಂಬಲ ನೀಡುತ್ತಿದೆ ಎಂದು ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಹಾರದಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಿದ್ದು, ಜನರು ಭಯದಲ್ಲಿಯೇ ಕಾಲ ಕಳೆಯುವಂತಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ನೋಡಿದರೆ ದುಖಃವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ರಾಜಕೀಯಕ್ಕೆ ಬರ್ತಾರಾ ಚಿರಾಗ್ ಪಾಸ್ವಾನ್

ಇದೇ ವೇಳೆ ರಾಜ್ಯ ರಾಜಕೀಯಕ್ಕೆ ಬರುವ ಮುನ್ಸೂಚನೆ ನೀಡಿದ ಪಾಸ್ವಾನ್,ತಾವೂ ರಾಜಕಾರಣಕ್ಕೆ ಪ್ರವೇಶ ಮಾಡಿರುವುದೇ ಬಿಹಾರದ ಜನರ ಅಭಿವೃದ್ಧಿಗಾಗಿ. ನನಗೆ ಬಿಹಾರ ಮೊದಲು, ನಮ್ಮ ರಾಜ್ಯವನ್ನು ಅಭಿವೃದ್ಧಿ ಹೊಂದಿದ ರಾಜ್ಯಗಳ ಸಮನಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಫರ್ಧಿಸಿದ ಎಲ್ಲ 5 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದು, ಅದೇ ರೀತಿಯ ಫಲಿತಾಂಶವನ್ನು ವಿಧಾನಸಭಾ ಚುನಾವಣೆಯಲ್ಲೂ ಮುಂದುವರೆಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net