ಜನರ ಸೇವೆಗೆ ಅಣಿಯಾಗುತ್ತಿದ್ದ ಅಂತಿಮ ವರ್ಷದ MBBS​ ವಿದ್ಯಾರ್ಥಿನಿ ದುರಂತ ಸಾವು

Desease Alphonsa
ಮೃತ ಅಲ್ಫೋನ್ಸಾ
Published on

ಪೆರಿಂಥಲಮನ್ನ: ಕೇರಳದ ಮಲ್ಲಪುರಂ ಜಿಲ್ಲೆಯ ಪೆರಿಂಥಲಮನ್ನದಲ್ಲಿರುವ ಎಂಇಎಸ್​ ಅಕಾಡೆಮಿ ಆಫ್​ ಮೆಡಿಕಲ್​ ಸೈನ್ಸ್​ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್​ ವಿದ್ಯಾರ್ಥಿನಿ ಭೀಕರ ರಸ್ತೆ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾಳೆ. ಈ ವರ್ಷ ಎಂಬಿಬಿಎಸ್​ ಮುಗಿಸಿ ಜನರ ಸೇವೆ ಸಜ್ಜಾಗುವ ಆಸೆಯಲ್ಲಿದ್ದ ವಿದ್ಯಾರ್ಥಿನಿ ಅಕಾಲಿಕ ಮರಣ ಹೊಂದಿದ್ದಾಳೆ.

ಮೃತಳನ್ನು ಅಲ್ಫೋನ್ಸಾ (22) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ 6.50ರ ಸುಮಾರಿಗೆ ಥಿರುಕಾಡ್​ನಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್​ ಅಪಘಾತದಲ್ಲಿ ಮೃತಪಟ್ಟಳು. ಆಕೆಯ ಜತೆಯಿದ್ದ ತ್ರಿಸ್ಸೂರ್​ ಮೂಲದ ಸಹಪ್ರಯಾಣಿಕ ಅಶ್ವಿನ್​ (22) ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ​

ಕಾಲೇಜಿಗೆ ತೆರಳುತ್ತಿದ್ದಾಗ ಅಲ್ಫೋನ್ಸಾ ಹಾಗೂ ಅಶ್ವಿನ್ ಪ್ರಯಾಣಿಸುತ್ತಿದ್ದ ಬೈಕ್ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪೆರಿಂಥಲಮನ್ನ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಲ್ಫೋನ್ಸಾಳ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net