

ರಾಮನಗರ: ಕಾರ್ಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರು ಘಟನೆ. ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಜಯಪುರ ಗೇಟ್ ಬಳಿ ದುರ್ಘಟನೆ ನಡೆದಿದೆ.
ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಕಾರ್ಗೆ ಬೈಕ್ ಡಿಕ್ಕಿಯಾಗಿದೆ. ಹಿಂಬದಿಯಿಂದ ಬಂದ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಯುವಕರು ರಸ್ತೆಗೆ ಬಿದ್ದಿದ್ದಾರೆ.
ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಟ್ಟು ಮೂರು ಮಂದಿ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.